ಭಟ್ಕಳ ಡೈರಿ ವರದಿ
ಭಟ್ಕಳ: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮೀನುಗಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನ ಹೆಬಳೆ ಗ್ರಾಮದ ಹೊನ್ನೆಗದ್ದೆ–ತೆಂಗಿನಗುಂಡಿ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಭಟ್ಕಳದ ವೆಂಕಟಾಪುರ ನಿವಾಸಿ ಲೋಕೇಶ ಪಾಂಡುರಂಗ ಮೊಗೇರ (೩೩) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಲೋಕೇಶ್ ಅವರು ರಾಷ್ಟ್ರೀಯ ಹೆದ್ದಾರಿ ೬೬ರಿಂದ ತೆಂಗಿನಗುಂಡಿ ಕಡೆಗೆ ತಮ್ಮ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಹೊನ್ನೆಗದ್ದೆ ಸಮೀಪ ಸ್ಕೂಟರ್ನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಅಪಘಾತದಲ್ಲಿ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯಕೀಯ ಚಿಕಿತ್ಸೆ ಮುಂದುವರಿದಿದ್ದರೂ ಗಾಯಗಳ ತೀವ್ರತೆಯಿಂದ ಅವರು ಮೃತಪಟ್ಟಿದ್ದಾರೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ :
ಭಟ್ಕಳದಲ್ಲಿ ವಿದ್ಯುತ್ ಸಮಸ್ಯೆಗೆ ದಶಕಗಳ ಇತಿಹಾಸ: ಮಳೆ ಕಡಿಮೆಯಾದರೂ ವಿದ್ಯುತ್ ಕಣ್ಣಾಮುಚ್ಚಾಲೆ, ಅಸಮಾಧಾನ
ಸೋಡಿಗದ್ದೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಗೋ ಪೂಜೆ ಸಂಪನ್ನ




