ಭಟ್ಕಳ ಡೈರಿ ವರದಿ
ಭಟ್ಕಳ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ಹಾಗೂ ಹೊನ್ನಾವರದ ಜಿ.ಯು. ಭಟ್ಟ ಅವರನ್ನು ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿ.ಯು. ಭಟ್ಟ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ. ಆದರೆ, ಪ್ರಶಸ್ತಿಯೊಂದಿಗೆ ಜವಾಬ್ದಾರಿಯೂ ಹೆಚ್ಚಾಗಿದೆ ಎಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದೇನೆ. ಜಿಲ್ಲೆಯ ಹಲವು ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನಹರಿಸಿ ಸ್ಪಂದಿಸುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು. ಭಟ್ಕಳದ ಪತ್ರಕರ್ತರು ತಮ್ಮ ಮೇಲೆ ಪ್ರೀತಿ ಮತ್ತು ಅಭಿಮಾನವಿಟ್ಟು ಸನ್ಮಾನಿಸಿರುವುದು ಮನತುಂಬಿ ಬಂದಿದೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಸತೀಶಕುಮಾರ ನಾಯ್ಕ, ಉತ್ತರ ಕನ್ನಡ ಜಿಲ್ಲೆಯ ಅರ್ಹ ವ್ಯಕ್ತಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸಂತಸದ ಸಂಗತಿ. ಅದರಲ್ಲೂ ಪತ್ರಕರ್ತರೊಬ್ಬರಿಗೆ ಈ ಗೌರವ ಸಂದಿರುವುದು ವಿಶೇಷ ಹೆಮ್ಮೆಯ ವಿಷಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿ.ಯು. ಭಟ್ಟ ಅವರ ಪತ್ನಿ ತಾರಾ ಭಟ್ಟ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ರಾಧಾಕೃಷ್ಣ ಭಟ್ಟ, ಅಧ್ಯಕ್ಷ ರಾಘವೇಂದ್ರ ಹೆಬ್ಬಾರ, ಉಪಾಧ್ಯಕ್ಷರಾದ ವಿಷ್ಣು ದೇವಡಿಗ ಹಾಗೂ ಎಂ.ಆರ್. ಮಾನ್ವಿ, ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಕಾರ್ಯದರ್ಶಿ ಶೈಲೇಶ ವೈದ್ಯ, ಸಂಘದ ಸದಸ್ಯರಾದ ಪ್ರಸನ್ನ ಭಟ್ಟ, ಈಶ್ವರ ನಾಯ್ಕ, ಲೋಕೇಶ ನಾಯ್ಕ ಹಾಗೂ ಮಂಜು ನಾಯ್ಕ ಉಪಸ್ಥಿತರಿದ್ದರು.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ :
ಆಸರಕೇರಿಯಲ್ಲಿ ೨೪ ದಿನಗಳ ಕಾರ್ತಿಕ ಭಜನೋತ್ಸವ: ಭಕ್ತಿಭಾವದಲ್ಲಿ ಮಿಂದೇಳುವ ಭಟ್ಕಳ ನಗರ
ತೆರ್ನಮಕ್ಕಿ ಸಭಾತಿ ಕ್ರಾಸ್ ಬಳಿ ರಸ್ತೆಗೆ ಅಡ್ಡ ಬಂದ ನಾಯಿ: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ




