ಭಟ್ಕಳ ಡೈರಿ ವರದಿ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ೧೨ ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅಮಾನವೀಯ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ತೀವ್ರವಾಗಿ ಖಂಡಿಸಿದ್ದಾರೆ. ಈ ಹೇಯ ಕೃತ್ಯ ಎಸಗಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಬಾಲಕಿಗೆ ಶೀಘ್ರ ನ್ಯಾಯ ದೊರಕಿಸಿಕೊಡಬೇಕು. ಇಂತಹ ಕೃತ್ಯ ಎಸಗುವವರಿಗೆ ಸಮಾಜಕ್ಕೆ ಎಚ್ಚರಿಕೆಯ ಸಂದೇಶ ನೀಡುವಂತಹ ಕಠಿಣ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಗೃಹ ಇಲಾಖೆಯ ಕಾರ್ಯವೈಖರಿಯ ಬಗ್ಗೆಯೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನಾದರೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಸರ್ಕಾರ ಮೊದಲ ಆದ್ಯತೆಯಾಗಿ ಪರಿಗಣಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿವಾನಿ ಶಾಂತಾರಾಮ ಒತ್ತಾಯಿಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ :
ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ಗೆ ಸ್ವಾಗತ; ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು
ಮುರುಡೇಶ್ವರದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಯಶಸ್ವಿ




