ಭಟ್ಕಳ ಡೈರಿ ವರದಿ

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಿಂಚನಾ ಆರ್. ನಾಯ್ಕ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಮಕ್ಕಳ ದಿನಾಚರಣೆಯ ಅಂಗವಾಗಿ ೨೦೨೬ರ ನವೆಂಬರ್ ೧೪ರಂದು ಕಾರವಾರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಜವಾಹರಲಾಲ್ ನೆಹರೂ ಅವರ ವಿಚಾರಧಾರೆಗಳನ್ನು ಆಧರಿಸಿ ನಡೆದ ಈ ಸ್ಪರ್ಧೆಯನ್ನು ಶಾಲಾ ಶಿಕ್ಷಣ ಇಲಾಖೆಯ (ಪದವಿಪೂರ್ವ) ವತಿಯಿಂದ ಧಾರವಾಡದ ಬಾಲವಿಕಾಸ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು.

ಸ್ಪರ್ಧೆಯಲ್ಲಿ ತಮ್ಮ ಭಾಷಣ ಕೌಶಲ್ಯ ಮತ್ತು ವಿಚಾರ ಮಂಡನೆಯ ಮೂಲಕ ಗಮನ ಸೆಳೆದ ಸಿಂಚನಾ ಆರ್. ನಾಯ್ಕ ದ್ವಿತೀಯ ಸ್ಥಾನ ಗಳಿಸುವ ಮೂಲಕ ಭಟ್ಕಳದ ಶೈಕ್ಷಣಿಕ ವಲಯಕ್ಕೆ ಹೆಮ್ಮೆ ತಂದಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಭಟ್ಕಳ ಎಜುಕೇಶನ್ ಟ್ರಸ್ಟ್, ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದು, ಮುಂದಿನ ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚಿನ ಯಶಸ್ಸು ದೊರೆಯಲಿ ಎಂದು ಹಾರೈಸಿದ್ದಾರೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ:

ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು; ಗುರು ವಿದ್ಯಾಧಿರಾಜ ಕಾಲೇಜಿನಲ್ಲಿ ನೃತ್ಯಾಂಜಲಿ ಸಂಭ್ರಮ

ಭಟ್ಕಳ ತಾಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗುರು ವಿದ್ಯಾಧಿರಾಜ ವಿದ್ಯಾರ್ಥಿಗಳ ಸಾಧನೆಯ ಸರಮಾಲೆ