ಭಟ್ಕಳ ಡೈರಿ ವರದಿ

ಭಟ್ಕಳ: ತಾಲೂಕಿನ ಹೆಬಳೆ ಗ್ರಾಮದ ಗಾಂಧಿನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಓಸಿ ಜುಗಾರಾಟ ನಡೆಸುತ್ತಿದ್ದ ಆರೋಪದ ಮೇಲೆ ಧಾರವಾಡ ಮೂಲದ ವ್ಯಕ್ತಿಯೊಬ್ಬನನ್ನು ಭಟ್ಕಳ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ಜಿಲ್ಲೆಯ ಗಂಗಿವಾಳದ ಅಂಚಟಗೇರಿ ರಸ್ತೆ ನಿವಾಸಿ, ೩೨ ವರ್ಷದ ಜಯವಂತ ಹನುಮಂತ ಪವಾರ ಬಂಧಿತ ಆರೋಪಿ.

ನವೆಂಬರ್ ೧೬ರಂದು ಮಧ್ಯಾಹ್ನ ೧.೩೦ರ ಸುಮಾರಿಗೆ ಗಾಂಧಿನಗರದ ಸ್ವಾಮಿ ಕೊರಗಜ್ಜ ಹೋಟೆಲ್ ಪಕ್ಕದ ಗೂಡಂಗಡಿ ಎದುರು ಸಾರ್ವಜನಿಕ ಸ್ಥಳದಲ್ಲಿ ಈತ ಓಸಿ ಜುಗಾರಾಟ ನಡೆಸುತ್ತಿದ್ದ ಎನ್ನಲಾಗಿದೆ. ಒಂದು ರೂಪಾಯಿಗೆ ೮೦ ರೂಪಾಯಿ ನೀಡುವ ಆಮಿಷವೊಡ್ಡಿ ಸಾರ್ವಜನಿಕರಿಂದ ಹಣ ಪಡೆದು, ಅಂಕೆ-ಸಂಖ್ಯೆಗಳ ಮೇಲೆ ಹಣದ ಪಂಥ ಕಟ್ಟಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿತನನ್ನು ಜುಗಾರಾಟಕ್ಕೆ ಸಂಬಂಧಿಸಿದ ಸ್ವತ್ತುಗಳ ಸಹಿತ ಸ್ಥಳದಲ್ಲೇ ಹಿಡಿಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ (ಕಾ-ಸು) ಮಲ್ಲಿಕಾರ್ಜುನಯ್ಯ ಕೊರಾಣಿ ಅವರು ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ ೭೮(೩)ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ :

ಕಂಡೆಕೊಡ್ಲಿನಲ್ಲಿ ಚಿರತೆ ಅಟ್ಟಹಾಸ: ಕರು ಬಲಿ, ಮತ್ತೊಂದು ದನದ ಮೇಲೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

ಪಟಾಕಿ ಸಿಡಿಸುವುದಷ್ಟೇ ಸಾಲದು, ಸೆರೆಹಿಡಿಯಿರಿ: ಗ್ರಾಮಸ್ಥರ ಒತ್ತಾಯ