ಭಟ್ಕಳ ಡೈರಿ ವರದಿ
ಭಟ್ಕಳ: ತಾಲೂಕಿನ ಹೆಬಳೆ ಗ್ರಾಮದ ಗಾಂಧಿನಗರ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಓಸಿ ಜುಗಾರಾಟ ನಡೆಸುತ್ತಿದ್ದ ಆರೋಪದ ಮೇಲೆ ೨೭ ವರ್ಷದ ಯುವಕನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾಲಿಯ ತಲಗೇರಿ ನಿವಾಸಿ ಕಿರಣ ಸುಬ್ಬಯ್ಯ ನಾಯ್ಕ (೨೭) ಪ್ರಕರಣದ ಆರೋಪಿಯಾಗಿದ್ದಾನೆ.
ನವೆಂಬರ್ ೧೭ರಂದು ಮಧ್ಯಾಹ್ನ ಸುಮಾರು ೨ ಗಂಟೆಗೆ ಗಾಂಧಿನಗರ ಸರ್ಕಲ್ ಬಳಿಯ ಗೂಡಂಗಡಿಯ ಎದುರು ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಅಂಕೆ ಸಂಖ್ಯೆಗಳ ಆಧಾರದಲ್ಲಿ ಓಸಿ ಜುಗಾರಾಟ ನಡೆಸುತ್ತಿದ್ದ ಎನ್ನಲಾಗಿದೆ. ಒಂದು ರೂಪಾಯಿಗೆ ೮೦ ರೂಪಾಯಿ ನೀಡುವ ಆಮಿಷವೊಡ್ಡಿ ಹಣದ ಪಂಥ ಕಟ್ಟಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಜುಗಾರಾಟಕ್ಕೆ ಸಂಬಂಧಿಸಿದ ಸ್ವತ್ತುಗಳ ಸಹಿತ ಸ್ಥಳದಲ್ಲೇ ಪತ್ತೆಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಲಂ ೭೮(೩) ಕೆ.ಪಿ. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ. ಮಲ್ಲಿಕಾರ್ಜುನಯ್ಯ ಕೊರಾಣಿ ಅವರು ಸರ್ಕಾರದ ಪರವಾಗಿ ದೂರು ದಾಖಲಿಸಿದ್ದಾರೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:
ಭಟ್ಕಳದಲ್ಲಿ ಕಾಡುಪ್ರಾಣಿಗಳ ಉಪಟಳ: ಜಾನುವಾರುಗಳೇ ಗುರಿ, ಮನುಷ್ಯರಿಗೂ ಕಂಟಕ




