ಭಟ್ಕಳ ಡೈರಿ ವರದಿ
ಭಟ್ಕಳ: ಶಾಲಾ ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ, ಕಲಾ ಪ್ರತಿಭೆ ಹಾಗೂ ಸುಪ್ತ ಸಾಮರ್ಥ್ಯವನ್ನು ಅನಾವರಣಗೊಳಿಸುವ ಉದ್ದೇಶದಿಂದ ನವೆಂಬರ್ ೧೯ರಂದು ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಭಟ್ಕಳ ಇವರ ಆಶ್ರಯದಲ್ಲಿ ೨೦೨೬-೨೭ನೇ ಸಾಲಿನ ಪ್ರತಿಭಾ ಕಾರಂಜಿ ನಡೆಯಲಿದೆ. ಜಾಲಿಯ ಸರ್ಕಾರಿ ಪ್ರೌಢಶಾಲೆ ಹಾಗೂ ಶ್ರೀ ವೆಂಕಟೇಶ್ವರ ನಾಮಧಾರಿ ವಿದ್ಯಾವರ್ಧಕ ಸಂಘದ ಸಭಾಭವನದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಜರುಗಲಿದೆ.
ಗುರುವಾರ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬೆಳಕೆ ವಲಯದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಹಾಗೂ ಸೃಜನಾತ್ಮಕ ಸ್ಪರ್ಧೆಗಳು ನಡೆಯಲಿದ್ದು, ಮಕ್ಕಳಲ್ಲಿರುವ ಕಲಾಸಕ್ತಿಗೆ ಪ್ರೋತ್ಸಾಹ ನೀಡುವ ವೇದಿಕೆಯಾಗಿ ಪ್ರತಿಭಾ ಕಾರಂಜಿ ಮೂಡಿಬರಲಿದೆ.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:




