ಭಟ್ಕಳ ಡೈರಿ ವರದಿ

ಭಟ್ಕಳ: ಪಟ್ಟಣದ ಹೃದಯಭಾಗದಲ್ಲಿರುವ ಬ್ರೌನ್ ವುಡ್ ಮುಂಭಾಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ಅಂಗವಾಗಿ ಚರಂಡಿ ನಿರ್ಮಾಣಕ್ಕೆ ಬೃಹತ್ ಗುಂಡಿ ತೋಡಲಾಗಿದ್ದು, ಸಮರ್ಪಕ ಸುರಕ್ಷತಾ ವ್ಯವಸ್ಥೆ ಇಲ್ಲದೆ ತೆರೆದಿಟ್ಟಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ರಸ್ತೆಯ ಪಕ್ಕದಲ್ಲೇ ಆಳವಾದ ಗುಂಡಿ ತೆರೆದಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಅಪಾಯ ಎದುರಾಗುವ ಸಾಧ್ಯತೆ ಇದೆ. ವಿಶೇಷವಾಗಿ ರಾತ್ರಿ ವೇಳೆ ಈ ಸ್ಥಳದಲ್ಲಿ ಸಂಚರಿಸುವವರಿಗೆ ಗುಂಡಿ ಕಾಣದೆ ಅಪಘಾತ ಸಂಭವಿಸುವ ಭೀತಿ ಹೆಚ್ಚಿದೆ.

ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿ, ಕಲ್ಲುಗಳು ಹಾಗೂ ಕಬ್ಬಿಣದ ಸರಳುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ವಾಹನ ಸಂಚಾರಕ್ಕೆ ಮತ್ತಷ್ಟು ತೊಂದರೆ ಉಂಟುಮಾಡುತ್ತಿದೆ. ಸ್ಥಳದಲ್ಲಿ ಕೆಲವೇ ಬ್ಯಾರಿಕೇಡ್‌ಗಳು ಮತ್ತು ಎಚ್ಚರಿಕೆ ಪಟ್ಟಿಗಳನ್ನು ಅಳವಡಿಸಲಾಗಿದ್ದರೂ, ಅಪಾಯವನ್ನು ತಡೆಗಟ್ಟಲು ಅವು ಸಾಕಾಗುತ್ತಿಲ್ಲ ಎಂಬ ಆತಂಕ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಕಾಮಗಾರಿ ಸ್ಥಳದ ಸುತ್ತಲೂ ಸಮರ್ಪಕ ಬ್ಯಾರಿಕೇಡ್‌ಗಳನ್ನು ಅಳವಡಿಸುವುದರ ಜೊತೆಗೆ ರಾತ್ರಿ ವೇಳೆ ಗೋಚರಿಸುವ ಎಚ್ಚರಿಕೆ ದೀಪಗಳ ವ್ಯವಸ್ಥೆ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಯಾವುದೇ ಅಪಘಾತ ಅಥವಾ ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ತಕ್ಷಣ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ :

ಭಟ್ಕಳದ ಅಳಿಯ, ಸಾಗರದ ಐಎಫ್‌ಎಸ್ ಅಧಿಕಾರಿಯ ಸಾಧನೆಗೆ ರಾಷ್ಟ್ರಮಟ್ಟದ ಮನ್ನಣೆ

ಭಟ್ಕಳದ ಶ್ರೀಗುರು ಸುಧೀಂದ್ರ ಕಾಲೇಜಿಗೆ ಸಿಎ ಪರೀಕ್ಷೆಯಲ್ಲಿ ಹೆಮ್ಮೆ ತಂದ ವಿದ್ಯಾರ್ಥಿಗಳು