ಭಟ್ಕಳ ಡೈರಿ ವರದಿ

ಭಟ್ಕಳ: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET)–೨೦೨೬ರಲ್ಲಿ ಉತ್ತೀರ್ಣರಾಗುವ ಮೂಲಕ ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕುಮಾರಿ ರೂಪಾ ಗೌಡ ಅವರು ಶೈಕ್ಷಣಿಕ ಸಾಧನೆ ಮೆರೆದಿದ್ದಾರೆ.

ಭಟ್ಕಳ ಎಜುಕೇಶನ್ ಟ್ರಸ್ಟ್‌ನ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ರೂಪಾ ಗೌಡ ಅವರ ಈ ಸಾಧನೆ ಕಾಲೇಜಿಗೆ ಹೆಮ್ಮೆ ತಂದಿದೆ.

ಅವರ ಶೈಕ್ಷಣಿಕ ಸಾಧನೆಗೆ ಭಟ್ಕಳ ಎಜುಕೇಶನ್ ಟ್ರಸ್ಟ್‌ನ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ

ಇದನ್ನೂ ಓದಿ:

ಭಟ್ಕಳದ ಶ್ರೀಗುರು ಸುಧೀಂದ್ರ ಕಾಲೇಜಿಗೆ ಸಿಎ ಪರೀಕ್ಷೆಯಲ್ಲಿ ಹೆಮ್ಮೆ ತಂದ ವಿದ್ಯಾರ್ಥಿಗಳು

ಕ್ಯಾಮೆರಾ ಮೂಲಕ ಅಪರಾಧ ತನಿಖೆಯ ಪಾಠ: ಸುಧೀಂದ್ರ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ