ಭಟ್ಕಳ ಡೈರಿ ವರದಿ
ಹೊನ್ನಾವರ: ತಾಲೂಕಿನ ಮಾಗೋಡು ಕ್ಲಸ್ಟರ್ನ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಕೊಟ್ಟಗೆದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉತ್ತರ ಕನ್ನಡ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ. ನಾಯ್ಕ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಹೊನ್ನಾವರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಷ ನಾಯ್ಕ್ ಮಾತನಾಡಿ, ಇಂದು ಈ ವೇದಿಕೆ ಪುಟ್ಟದಾಗಿ ಕಾಣಿಸಬಹುದು. ಆದರೆ ಮುಂದೊಂದು ದಿನ ಮಕ್ಕಳು ಬಹಳ ಎತ್ತರಕ್ಕೆ ಬೆಳೆಯಲು ಇದೇ ವೇದಿಕೆ ಸಾಕ್ಷಿಯಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕ ಲಕ್ಷ್ಮಣ ಪಟಗಾರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಚಿಯ ಹಿರಿಯ ಶಿಕ್ಷಕ ಎಸ್.ಎಂ. ಲೋಪಿಸ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಸ್ಮಾಯಿಲ್ ಖಾನ್ ವಹಿಸಿದ್ದರು. ಸಿಆರ್ಟಿ ಆದ ದಿನೇಶ್ ದೇಶಭಂಡಾರಿ ಸ್ವಾಗತಿಸಿದರು. ಶಿಕ್ಷಕ ಗಣೇಶ ಭಟ್ ನಿರೂಪಿಸಿದರು. ಮುಖ್ಯ ಶಿಕ್ಷಕ ಮಾರುತಿ ನಾಯ್ಕ್ ವಂದಿಸಿದರು. ನಂತರ ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಭಟ್ಕಳ ಡೈರಿ | ನೈಜ-ನಿಷ್ಪಕ್ಷಪಾತ
ಇದನ್ನೂ ಓದಿ:
ಗೇರುಸೊಪ್ಪ: ನಾಗಂತೂರು ಕ್ಲಸ್ಟರ್ ಪ್ರತಿಭಾ ಕಾರಂಜಿ
ಭಟ್ಕಳ ಜಾಲಿಯಲ್ಲಿ ಬೆಳಕೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸಂಭ್ರಮ
ರೀಲ್ಸ್ ನೋಡಿ :




Trackbacks/Pingbacks