ಭಟ್ಕಳ: ಇಂದಿನ ಸರ್ಕಾರಿ ನೌಕರರಿಗೆ ದೈಹಿಕ ಮತ್ತು ಮಾನಸಿಕ ಒತ್ತಡವಿದೆ. ಹೀಗಾಗಿ ಅವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದು ತಹಶೀಲ್ದಾರ ನಾಗರಾಜ ನಾಯ್ಕಡ ಹೇಳಿದರು.
ಇದನ್ನೂ ಓದಿ : ತಹಶೀಲ್ದಾರ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆ, ಚುನಾವಣೆಗೆ ಸಿದ್ಧತೆ
ಅವರು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಹಾಗೂ ತಾಲೂಕು ಆಸ್ಪತ್ರೆ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು
ಈ ವಿಡಿಯೋ ನೋಡಿ : ಶಿರಸಿ ಮಾರಿಕಾಂಬಾ ದೇವಿಯ ರಥೋತ್ಸವದಲ್ಲಿ ಜನಸಾಗರ https://fb.watch/qWCRppWHOm/?mibextid=Nif5oz
ಕೆಲವು ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಸರಕಾರಿ ನೌಕರರು ಎರಡು ಮೂರು ಹುದ್ದೆಗಳ ಜವಾಬ್ದಾರಿ ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅತ್ಯಂತ ಒತ್ತಡದಲ್ಲಿ ತನ್ನ ಕಾರ್ಯಮಾಡುತ್ತಾ ಆರೋಗ್ಯದ ಕಡೆಗೆ ಗಮನವಹಿಸಲು ಸಹ ಸಾಧ್ಯವಿಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬಹುದಾದ ಉಚಿತ ಆರೋಗ್ಯ ಶಿಬಿರವನ್ನು ಸರಕಾರಿ ನೌಕರರ ಸಂಘ ಆಯೋಜಿಸಿದ್ದು ಅತ್ಯಂತ ಪ್ರಶಂಸನಾರ್ಹ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮಾತನಾಡಿ, ಭಟ್ಕಳದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ಸರಕಾರಿ ನೌಕರರಿಗಾಗಿ ಸಾಂಸ್ಕೃತಿಕ ಸ್ಪರ್ಧೆ, ಕ್ರೀಡೆ, ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿ, ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ಧನ ಸಹಾಯ ಹೀಗೆ ವಿಭಿನ್ನ ಕಾರ್ಯಕ್ರಮಗಳನ್ನು ಮಾಡಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಸವಿತಾ ಕಾಮತ, ಡಾ. ವಿರೇಂದ್ರ ಶಾನಭಾಗ, ಡಾ.ಕವಿಶಾ ಮಾತನಾಡಿದರು. ವೇದಿಕೆಯಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಖಜಾಂಚಿ ಕುಮಾರ ನಾಯ್ಕ , ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್ ಜಿ ಹೆಗಡೆ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ನೂರಾರು ನೌಕರರು ಶಿಬಿರದ ಪ್ರಯೋಜನ ಪಡೆದುಕೊಂಡರು. ಹೃದ್ರೋಗ, ಮೂಳೆ ಮತ್ತು ಕೀಲು, ಸಾಮಾನ್ಯ ಚಿಕಿತ್ಸೆ, ಸ್ತ್ರೀರೋಗ, ಕಣ್ಣು, , ಚರ್ಮ ರೋಗದ ಚಿಕಿತ್ಸೆಯನ್ನು ವಿವಿಧ ತಜ್ಞ ವೈದ್ಯರು ನೀಡಿದರು.
ರಾಜ್ಯ ಪರಿಷತ್ ಸದಸ್ಯ ಪ್ರಕಾಶ ಶಿರಾಲಿ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ ಹೆಗಡೆ ವಂದಿಸಿದರು. ಶಿಕ್ಷಕ ಪರಮೇಶ್ವರ ನಾಯ್ಕ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಶಿಕ್ಷಕಿ ಕುಸುಮಾ ಪ್ರಾರ್ಥಿಸಿದರು.