ಕಾರವಾರ : ಜಾನುವಾರುಗಳಿಗೆ  ಕಾಲುಬಾಯಿ ರೋಗ ತಡೆಗಟ್ಟಲು ಜಿಲ್ಲೆಯಲ್ಲಿ ಏ.೧ ರಿಂದ ೩೦ ರವರೆಗೆ ನಡೆಯುವ 5ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದ್ದಾರೆ.

ಇದನ್ನೂ ಓದಿ : ಚಿನ್ನ ಸಾಗಾಟ : ಭಟ್ಕಳ ಮೂಲದ ವ್ಯಕ್ತಿ ಬಂಧನ

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 5ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ  ಜಿಲ್ಲಾ ಮಟ್ಟದ  ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ವಿಡಿಯೋ ನೋಡಿ : ಮಿರ್ಚಿ ಭಜಿ, ಮಂಡಕ್ಕಿ ಸವಿದ ಹ್ಯಾಟ್ರಿಕ್ ಹೀರೊ  https://fb.watch/qY7Cd89X_3/?mibextid=Nif5oz

ಜಾನುವಾರುಗಳಿಗೆ  ಕಾಲುಬಾಯಿ ರೋಗ ತಡೆಗಟ್ಟಲು ಜಿಲ್ಲೆಯಲ್ಲಿ ಏ.೧ ರಿಂದ ೩೦ ರವರೆಗೆ ನಡೆಯುವ 5ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ಈ ಸಂಬಂಧ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆಯಿಂದ ಹೊರ ಉಳಿಯದಂತೆ ಮಾಡಲು ಜಿಲ್ಲೆಯ ಎಲ್ಲಾ ನಗರ ಮತ್ತು ಗ್ರಾಮ ಮಟ್ಟದಲ್ಲಿ ವ್ಯಾಪಕ ಪ್ರಚಾರ ಮತ್ತು ಸ್ವಚ್ಛತೆ ವಾಹನಗಳಲ್ಲಿ ಜಿಂಗಲ್ಸ್ ಹಾಕಿ. ರೈತರಿಗೆ ಲಸಿಕೆ ಹಾಕಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ಮಾಹಿತಿ ನೀಡುವಂತೆ ಪಶುಪಾಲನ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಪಶುಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಪ್ರತಿ ಆರು ತಿಂಗಳಿಗೊಮ್ಮೆ ನಡೆಯುವ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಸದುಪಯೋಗವನ್ನು ಜಿಲ್ಲೆಯ ಎಲ್ಲಾ ರೈತರು, ಜಾನುವಾರು ಸಾಕಾಣಿಕೆದಾರರು  ಪಡೆಯಬೇಕು.  ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಬೇಕೆಂದು ತಿಳಿಸಿದರು.

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ‌ನಿರ್ದೇಶಕ ಡಾ. ಮೋಹನ ಮಾತನಾಡಿ, ಜಿಲ್ಲೆಯ ರೈತರ ಮನೆ ಮನೆಗೆ ತೆರಳಿ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕುವುದರ ಮೂಲಕ ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು  ಯಶಸ್ವಿಗೊಳಿಸಲಾಗುವುದು ಎಂದರು.

ಸಭೆಯಲ್ಲಿ  ಎಲ್ಲ ತಾಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು, ಕೆಎಂಎಫ್ ಅಧಿಕಾರಿ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.