ಶಿವಮೊಗ್ಗ: ಇಲ್ಲಿನ ಸಮಾಜ ಕಲ್ಯಾಣ ಅಧಿಕಾರಿ ಕಾಮಗಾರಿ ಬಿಲ್ ಬಿಡುಗಡೆಗೆ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಕಾಮಗಾರಿ ಬಿಲ್ ಬಿಡುಗಡೆ ಮಾಡಲು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಗೋಪಿನಾಥ್, ಗುತ್ತಿಗೆದಾರ ರವಿಕುಮಾರ್ ಅವರಿಂದ 15 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.