ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯು ೨೦೨೩-೨೪ನೇ ಸಾಲಿನ ಪ್ರಥಮ ಪಿಯುಸಿ ಫಲಿತಾಂಶ ಇಂದು (ಮಾರ್ಚ್ ೩೦, ಶನಿವಾರ)ರಂದು ಪ್ರಕಟವಾಗಲಿದೆ.

ಇದನ್ನೂ ಓದಿ : ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ : ಪ್ರಯಾಣಿಕ ಸೆರೆ

ಮಂಡಳಿಯ ವೆಬ್ಸೈಟ್ (karresults.nic.in)ನಲ್ಲಿ ಫಲಿತಾಂಶವನ್ನು ಬೆಳಿಗ್ಗೆ ೯ರಿಂದ ೧೧ರೊಳಗೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಇಂದೇ ಕಾಲೇಜುಗಳಲ್ಲಿಯೂ ಫಲಿತಾಂಶ ಪ್ರಕಟವಾಗಲಿದೆ. ಕಾಲೇಜುಗಳಲ್ಲಿಯೂ ವಿದ್ಯಾರ್ಥಿಗಳು ವೀಕ್ಷಿಸಬಹುದು ಎಂದು ತಿಳಿಸಲಾಗಿದೆ.
ಫೆ.೧೨ ರಿಂದ ೨೭ರ ವರೆಗೆ ಪಿಯುಸಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ಪರೀಕ್ಷೆ ಬರೆಯಲಾಗದವರಿಗೆ ಮೇ ತಿಂಗಳಲ್ಲಿ ಸಪ್ಲಿಮೆಂಟರಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಇದರ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ.

ಕ್ಲಿಕ್ ಮಾಡಿ :ನಿರಂತರ ಅಪ್ಡೇಟ್ ಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಿ