ಭಟ್ಕಳ : ಚಾಲಕನ ನಿಯಂತ್ರಣ ತಪ್ಪಿ ನಿರ್ಮಾಣ ಹಂತದಲ್ಲಿರುವ ಡಿವೈಡರ್ ಗೆ ಕಾರೊಂದು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ರಂಗಿನಕಟ್ಟೆಯ ಜೆ.ಎಂ.ಎಫ್.ಸಿ. ನ್ಯಾಯಾಲಯದ ಮುಂಭಾಗ ನಡೆದಿದೆ.
ಇದನ್ನೂ ಓದಿ : ಪ್ರಥಮ ಪಿಯುಸಿ ಫಲಿತಾಂಶ ಇಂದು
ಕುಂದಾಪುರದಿಂದ ಮುರುಡೇಶ್ವರ ಕಡೆಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಪೈಕಿ ಮಿನಿಫಾ ಬಾನು ( 18) ಹಾಗೂ ಜುಬೈದಾ ಬಾನು (40) ಇವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕಾರಿನ ಚಾಲಕ ಉಮರ್ ತೌಸೀಫ್ ಹಾಗೂ ಇನ್ನೋರ್ವ ಪ್ರಯಾಣಿಕ ಇಬ್ರಾಹಿಂ ಸುರಕ್ಷಿತವಾಗಿದ್ದಾರೆ. ಅಪಘಾತದ ವೇಳೆ ಕಾರಿನಲ್ಲಿದ್ದ ಏರ್ ಬ್ಯಾಗ್ ತೆರೆದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ನಿರಂತರ ಮಾಹಿತಿ ಮತ್ತು ವಿಡಿಯೋ ಸುದ್ದಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋ ಮಾಡಿ. ಇಲ್ಲಿ ಕ್ಲಿಕ್ ಮಾಡಿ
ಅಪಘಾತಕ್ಕೆ ಕಾರಣ
ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ಕೆಲ
ದಿನಗಳಿಂದ ಡಿವೈಡರ್ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಸರಿಯಾದ ಸೂಚನಾ ಫಲಕ ಅಳವಡಿಸಿಲ್ಲ. ಅಲ್ಲದೇ ವಿದ್ಯುತ್ ದೀಪದ ಕೊರತೆ ಇರುವುದರಿಂದ ಅಪಘಾತಕ್ಕೆ ಮೂಲ ಕಾರಣವಾಗಿದೆ ಎಂದು ಸ್ಥಳದಲ್ಲಿ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.