ಭಟ್ಕಳ : ಸರ್ಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಭಟ್ಕಳದ ಹಿಂದೂ ಕಾರ್ಯಕರ್ತ, ಹಿಂದೂ ಸಂಘಟನೆಯಲ್ಲಿ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ನಾಯ್ಕ ಅವರ ಮೇಲೆ ಗಡಿಪಾರು ಕೇಸು ದಾಖಲಾಗಿಸಲಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದ್ದಾರೆ.
ಇದನ್ನೂ ಓದಿ : ಹಿಂದೂ ಕಾರ್ಯಕರ್ತ ಶ್ರೀನಿವಾಸ ನಾಯ್ಕ ಗಡಿಪಾರಿಗೆ ನೋಟಿಸ್ ಜಾರಿ
ಈ ಕುರಿತು ಎಕ್ಸ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಹಿಂದೂ ಸಮಾಜಕ್ಕೆ ಅನ್ಯಾಯವಾದಾಗ ಹಿಂದೂಗಳ ಪರ ಧ್ವನಿ ಎತ್ತುತ್ತಿದ್ದ ಶ್ರೀನಿವಾಸ ನಾಯ್ಕ ಅವರ ವಿರುದ್ಧ ಗಡಿಪಾರು ಕೇಸು ದಾಖಲಿಸುವ ಮೂಲಕ ಜಿಲ್ಲೆಯಲ್ಲಿ ಹಿಂದೂಪರ ಕಾರ್ಯಕರ್ತರ ಧ್ವನಿ ಅಡಗಿಸಲು ಹೊರಟಿದೆ ಅಧಿಕಾರಿ ವರ್ಗ ಎಂದು ತಿಳಿಸಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ರಾಜ್ಯದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರುಗಳು ಹಲವು ಸಂದರ್ಭಗಳಲ್ಲಿ ಬಹಿರಂಗ ಸಭೆಗಳಲ್ಲಿ ಒಂದು ಸಮುದಾಯವನ್ನು ಓಲೈಕೆ ಮಾಡುವ ರೀತಿಯ ಮಾತುಗಳನ್ನು ಆಡುತ್ತಾ ಬಂದಿರುವುದು ಹೊಸ ವಿಷಯವೇನಲ್ಲ. ಅಂತಹ ಓಲೈಕೆ ಮಾತುಗಳ ಗುರಿ ಹಿಂದುತ್ವ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಎನ್ನುವುದೂ ಕೂಡ ಕಾಂಗ್ರೆಸ್ ಸರ್ಕಾರದ ಇಲ್ಲಿಯವರೆಗಿನ ನಡೆಗಳು ಸಾರಿ ಹೇಳುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಒಬ್ಬ ಪ್ರಾಮಾಣಿಕ ಹಿಂದೂ ಕಾರ್ಯಕರ್ತನ ಮನೋಸ್ಥೈರ್ಯವನ್ನು ಕುಗ್ಗಿಸಲು ಹೊರಟಿರುವ ಅಧಿಕಾರ ವರ್ಗಕ್ಕೆ ಕುಮ್ಮಕ್ಕು ನೀಡಿದವರು ಯಾರು? ಯಾವುದೇ ಸ್ವಾರ್ಥವಿಲ್ಲದೆ ಹಿಂದೂ ಸಮಾಜಕ್ಕೆ ಅನ್ಯಾಯವಾದಾಗ ಮುಂಚೂಣಿಯಲ್ಲಿ ನಿಂತು ಹೋರಾಡುವ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುವದರ ಹಿಂದೆ ಇರುವ ಉದ್ದೇಶವೇನು? ಎಂದು ಪ್ರಶ್ನಿಸಿರುವ ಹರಿಪ್ರಕಾಶ ಕೋಣೆಮನೆ, ಸರ್ಕಾರವೇ ಇದಕ್ಕೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಮಸ್ತ ಹಿಂದೂ ಸಮಾಜ ಶ್ರೀನಿವಾಸ ನಾಯ್ಕ ಅವರ ಬೆಂಬಲಕ್ಕಿದೆ. ಹಿಂದೂ ಹೋರಾಟಗಾರರನ್ನು ಹತ್ತಿಕ್ಕುವ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದೂ ಹರಿಪ್ರಕಾಶ ಕೋಣೆಮನೆ ಒತ್ತಾಯಿಸಿದ್ದಾರೆ.