ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಏ. ೬ರಿಂದ ೮ ರವರೆಗೆ ಉತ್ತರ ಕನ್ನಡ ಸಹಿತ ಹಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಲಕ್ಷ್ಮಣ ಸವದಿ ಆಪ್ತ ನಡು ರಸ್ತೆಯಲ್ಲೇ ಕೊಲೆ !
ದಕ್ಷಿಣ ಕನ್ನಡ, ಬೀದರ, ಕಲಬುರ್ಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಏ.೬ ರಂದು ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಏ.೭ರಂದು ದಕ್ಷಿಣ ಕನ್ನಡ, ಬೀದರ, ಕಲಬುರ್ಗಿ, ಚಿಕ್ಕಮಗಳೂರು, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಏ. ೮ ರಂದು ಉತ್ತರ ಕನ್ನಡ ಸಹಿತ ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.