ವಿಜಯಪುರ : ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ. ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಸಾತ್ವಿಕ್ ಸಾವು ಗೆದ್ದು ಬಂದಿದ್ದಾನೆ.
ಇದನ್ನೂ ಓದಿ : ಕೊಳವೆ ಬಾವಿಗೆ ಬಿದ್ದ ೨ ವರ್ಷದ ಮಗು
ಸುಮಾರು ೨೧ ಗಂಟೆಗೂ ಹೆಚ್ಚು ಕಾಲ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಸುಮಾರು ೨೦ ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ಹೊರೆತೆಗೆಯಲಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಮಗು ಬಿದ್ದ ಅರ್ಧ ಗಂಟೆಯಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ ಕಾರಣ ಮಗುವನ್ನು ರಕ್ಷಿಸಲು ಸಾಧ್ಯವಾಯಿತು. ಬುಧವಾರ ರಾತ್ರಿಯೇ ಹಿಟಾಚಿ ಮೂಲಕ ಕೊಳವೆಬಾವಿ ಪಕ್ಕದಲ್ಲಿ ಅಡ್ಡವಾಗಿ ೩ ಅಡಿ ರಂಧ್ರ ಕೊರೆಯಲಾಯಿತು. ಆ ರಂಧ್ರದ ಮೂಲಕವೇ ಬಾಲಕ ಬಿದ್ದಿರುವ ಜಾಗಕ್ಕೆ ಹಗ್ಗದ ಮೂಲಕ ಒಂದು ಕ್ಯಾಮೆರಾ ಇಳಿಸಲಾಯಿತು. ಬಾಲಕನ ಚಲನವಲನದ ಮೇಲೆ ಕ್ಯಾಮೆರಾ ಮೂಲಕ ನಿಗಾ ಇರಿಸಿ, ನಿರಂತರವಾಗಿ ಆಕ್ಸಿಜನ್ ಪೂರೈಕೆ ಮಾಡಲಾಯಿತು. ಬಾಲಕನ ಕಾಲು ಅಲುಗಾಡುತ್ತಿರುವುದನ್ನು ಕ್ಯಾಮೆರಾ ಮೂಲಕ ಸೆರೆಹಿಡಿದ ಸಿಬ್ಬಂದಿಯು, ಕಾರ್ಯಾಚರಣೆಯನ್ನು ಇನ್ನಷ್ಟು ಕ್ಷಿಪ್ರಗೊಳಿಸಿ, ಕೊನೆಗೆ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ : ಉತ್ತರ ಕನ್ನಡ ಸಹಿತ ಹಲವೆಡೆ ಮಳೆ ಸಾಧ್ಯತೆ
ಬುಧವಾರ ಸಂಜೆ 6 ಗಂಟೆಯಿಂದಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಸತತವಾಗಿ ಕಾರ್ಯಾಚರಣೆ ನಡೆಸಿ ಕೊನೆಗೂ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಲಕ್ಷ್ಮಣ ಸವದಿ ಆಪ್ತ ನಡು ರಸ್ತೆಯಲ್ಲೇ ಕೊಲೆ !
ಸಾತ್ವಿಕ್ ಬದುಕಿ ಬರಲಿ ಎಂದು ಗ್ರಾಮದಲ್ಲಿ ಹಾಗೂ ಸುತ್ತಮುತ್ತ ಜನ ದೇವಾಲಯಗಳಲ್ಲಿ ವಿಶೇಷ ಪೂಜೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದರು. ಲಚ್ಯಾಣ ಗ್ರಾಮದ ಸಿದ್ದಪ್ಪ ಮಹಾರಾಜರ ಗದ್ದುಗೆಗೆ ಗ್ರಾಮದ ಯುವಕರಿಂದ ವಿಶೇಷ ಪೂಜೆ ನಡೆದಿತ್ತು. ಬಾಲಕ ಬದುಕಿ ಬರಲಿ ಎಂದು ಪೂಜೆ ಸಲ್ಲಿಸಿ ಯುವಕರು ಪ್ರಾರ್ಥನೆ ಸಲ್ಲಿಸಿದ್ದರು. ಬಾಲಕನ ತಂದೆ-ತಾಯಿಯಂತೂ ರಾತ್ರಿಯಿಡೀ ಕೊಳವೆಬಾವಿ ಪಕ್ಕದಲ್ಲೇ ಇದ್ದು ದೇವರಲ್ಲಿ ಪ್ರಾರ್ಥನೆ ಮಾಡಿದ್ದರು. ಈಗ ಪ್ರಾರ್ಥನೆ ಫಲಿಸಿದ್ದು, ಬಾಲಕ ಆರೋಗ್ಯವಾಗಿದ್ದಾನೆ ಎಂದು ತಿಳಿದುಬಂದಿದೆ.
ಕೊಳವೆಬಾವಿಯ ಪಕ್ಕದಲ್ಲಿಯೇ ಆಂಬುಲೆನ್ಸ್ ನಿಂತಿತ್ತು. ವೈದ್ಯರು ಬಾಲಕನ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಸುಮಾರು ೨೦ ಗಂಟೆಗೂ ಹೆಚ್ಚು ಕಾಲ ಮಗು ಕೊಳವೆಬಾವಿಯಲ್ಲಿಯೇ ಇದ್ದ ಕಾರಣ ಆತನ ಉಸಿರಾಟ ಸೇರಿ ಹಲವು ರೀತಿಯ ತಪಾಸಣೆ ಮಾಡಲಾಗುತ್ತದೆ. ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಮಗುವಿನ ಆರೋಗ್ಯ ತಪಾಸಣೆ ನಡೆದು, ಆರೋಗ್ಯ ದೃಢಪಡಿಸಿಕೊಂಡ ಬಳಿಕವೇ ಮಗುವನ್ನು ಕುಟುಂಬಸ್ಥರಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.