ಚನ್ನಮ್ಮನ ಕಿತ್ತೂರು : ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದ ಕಿತ್ತೂರು ದೇಗುಲಹಳ್ಳಿ-ಅಂಬಡಗಟ್ಟಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಇದೀಗ ಉತ್ತರ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ : ವೀರೇಶ್ವರ ಸ್ವಾಮೀಜಿ ಲೋಕಸಭೆ ಚುನಾವಣಾ ಕಣಕ್ಕೆ !
ಬೆಳಗಾವಿ ಲೋಕಸಭಾ ಕ್ಷೇತ್ರದ ಎಂಟು ಮತಕ್ಷೇತ್ರದಲ್ಲಿ ನನ್ನ ಭಕ್ತರಿದ್ದಾರೆ. ಅವರ ಒತ್ತಾಯದಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸುವುದಾಗಿ ಸ್ವಾಮೀಜಿ ಹೇಳಿದ್ದರು. ಇದೀಗ ದಿಢೀರ್ ತಮ್ಮ ನಿರ್ಧಾರ ಬದಲಿಸಿರುವ ಸ್ವಾಮೀಜಿ, ಕಿತ್ತೂರು ಮತಕ್ಷೇತ್ರ ಉತ್ತರ ಕನ್ನಡ ಲೋಕಸಭಾ ವ್ಯಾಪ್ತಿಗೆ ಬರುವುದರಿಂದ ಕ್ಷೇತ್ರ ಬದಲಿಸಲು ತೀರ್ಮಾನಿಸಿದ್ದಾರೆ. ಮಠದ ಸ್ವಾಮೀಜಿಯಾಗಿ ಸೇವೆ ಸಲ್ಲಿಸುತ್ತಿರುವ ನಾನು ಸಮಾಜ ಸೇವೆ ಮಾಡಬೇಕು. ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಕಣಕ್ಕಿಳಿಯುತ್ತಿದ್ದೇನೆ. ಇದು ನನ್ನ ವೈಯಕ್ತಿಕ ಹಾಗೂ ಭಕ್ತರ ಇಚ್ಛೆ ಆಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ .
ಕಿತ್ತೂರು ಹಾಗೂ ಖಾನಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಭೆ ನಡೆಸಲಾಗಿದೆ. ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಜನ ಸದಾ ನನ್ನೊಂದಿಗೆ ಇದ್ದಾರೆ. ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಹೇಳಿದ್ದಾರೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ : ಹಿಟ್ ಅಂಡ್ ರನ್ ಅಪಘಾತ ಪ್ರಕರಣಗಳಿಗೂ ಪರಿಹಾರ
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುತ್ತಿದ್ದಾರೆ. ಆದರೆ, ನನಗೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಒಂದೇ. ಜನಸೇವೆ ಮಾಡುವ ಉದ್ದೇಶದಿಂದ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.