ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ವ್ಯಕ್ತಿ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ದೂರು ನೀಡಲಾಗಿದೆ.

ಇದನ್ನೂ ಓದಿ : ಭಟ್ಕಳ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಈಶ್ವರ ನಾಯ್ಕ ನೇಮಕ

ಈ ಬಗ್ಗೆ ಕಾರವಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಹೆಚ್‌.ನಾಯ್ಕ ಕಾಗಲ್, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮ್ಮ ಅಭ್ಯರ್ಥಿಯನ್ನ ಬೆಂಬಲಿಸಿ ವಿಡಿಯೋವೊಂದನ್ನು ಫೇಸ್‌ಬುಕ್‌ ನಲ್ಲಿ ಕಾಂಗ್ರೆಸ್ ಸಾಮಾಜಿಕ ತಾಣಗಳ ವಿಭಾಗದ ಸೂರಜ್ ನಾಯ್ಕ ಅವರು ಹಂಚಿಕೊಂಡಿದ್ದರು. ಅದಕ್ಕೆ ಬಿಜೆಪಿ ಕಾರ್ಯಕರ್ತ ಕುಮಟಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎಂಬಾತ ತನ್ನ ಫೇಸ್‌ಬುಕ್ ಖಾತೆಯಿಂದ ನಿಂದನಾತ್ಮಕವಾಗಿ ಕಮೆಂಟ್ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಜಾತಿ ನಿಂದನೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಶ್ರೀಕಾಂತ ಹೆಗಡೆ ಅಂತ್ರವಳ್ಳಿ ಎಂಬಾತನ ವಿರುದ್ಧ ಕುಮಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಯ ಸಂದರ್ಭ ಪಕ್ಷ, ಅಭ್ಯರ್ಥಿಗಳ ಪರ- ವಿರೋಧ ಸಹಜ. ಆದರೆ ನಮ್ಮ ಅಭ್ಯರ್ಥಿಯ ಜಾತಿ ಗುರಿಯಾಗಿಸಿಕೊಂಡು ಅವಹೇಳನ ಮಾಡುವುದು ಅಕ್ಷಮ್ಯ. ಜಾತಿ ಜಾತಿಗಳ ನಡುವೆ ವೈಷಮ್ಯ ಬೀರುತ್ತಲೇ ಬಂದಿರುವ ಬಿಜೆಪಿಗರು ಮತ್ತೆ ಮತ್ತೆ ಅದನ್ನೇ ಮುಂದುವರಿಸಿದ್ದಾರೆ. ಹೀಗಾಗಿ ಈ ದೂರು ವೈಯಕ್ತಿಕವಾಗಿ ಹಾಗೂ ಅಸಭ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮಾಡುವವರಿಗೆ ಪಾಠವಾಗಬೇಕಿದೆ. ಈ ಬಗ್ಗೆ ಚುನಾವಣಾಧಿಕಾರಿಗಳೂ ಗಮನಹರಿಸಿ ಕ್ರಮ ಕೈಗೊಳ್ಳಬೇಕಿದೆ ಎಂದು ಆರ್.ಎಚ್.ನಾಯ್ಕ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ !

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಪರ ಅಲೆ ಇದೆ. ಗ್ಯಾರಂಟಿಗಳನ್ನ ಜಾರಿಗೆ ತಂದಿರುವುದರಿಂದ ಜನರು ಕಾಂಗ್ರೆಸ್ ಪರ ಮತ ಹಾಕಲು ಸಿದ್ಧರಾಗಿದ್ದಾರೆ. ಇದನ್ನ ಸಹಿಸದ ಬಿಜೆಪಿಗರು ನಿಂದನೆ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ದೂರಿದರು.

ಇದನ್ನೂ ಓದಿ : ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಈ ಸಂದರ್ಭದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾದ ಸೂರಜ್ ನಾಯ್ಕ, ಅಜಯ್ ಸಿಗ್ಲಿ, ಅಶ್ರಫ್ ಸೇರಿದಂತೆ ಇತರರು ಇದ್ದರು.

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನವರು ಯಾರನ್ನೂ ವೈಯಕ್ತಿಕ ತೇಜೋವಧೆ ಮಾಡುತ್ತಿಲ್ಲ. ಆದರೆ ಬಿಜೆಪಿಗರು ಕಾಂಗ್ರೆಸ್ ಹಾಗೂ ಪಕ್ಷದ ನಾಯಕರ ಮೇಲೆ ವೈಯಕ್ತಿಕ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ.‌ ಇದಕ್ಕೆ ಕಡಿವಾಣ ಹಾಕಲು ಇನ್ನು ಮುಂದೆ ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟು ನಿಂದಿಸುವವರ ಮೇಲೆ ದೂರು ದಾಖಲಿಸುತ್ತೇವೆ.
ಆರ್.ಹೆಚ್‌‌.ನಾಯ್ಕ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ