ಸೊರಬ: ಮಾಜಿ ಮುಖ್ಯಮಂತ್ರಿ ದಿ.ಎಸ್ ಬಂಗಾರಪ್ಪನವರ ೯೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬಂಗಾರಧಾಮದಲ್ಲಿನ ಬಂಗಾರಪ್ಪನವರ ಸಮಾಧಿಗೆ ಸಚಿವ ಎಸ್. ಮಧು ಬಂಗಾರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಧು ಬಂಗಾರಪ್ಪ ಧರ್ಮಪತ್ನಿ ಅನಿತಾ ಮಧು ಬಂಗಾರಪ್ಪ, ಪುತ್ರ ಸೂರ್ಯ ಮಧು ಬಂಗಾರಪ್ಪ, ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಡಿ.ಬಿ. ಅಣ್ಣಪ್ಪ, ಹೆಚ್ ಗಣಪತಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಸಂಜಯ್ ದೇವತಿಕೊಪ್ಪ ಮತ್ತಿತರರಿದ್ದರು.