ಬೆಂಗಳೂರು: ಪ್ರೀತಿಸಿ ಮದುವೆ ಆಗಿದ್ದ ಆ ಜೋಡಿಯಲ್ಲಿ ಮಗು ಮಾಡಿಕೊಳ್ಳುವ ವಿಚಾರಕ್ಕೆ ಆರಂಭಗೊಂಡ ಗಲಾಟೆ ಭಟ್ಕಳ ಮೂಲದ ಯುವತಿಯ ಕೊಲೆಯಲ್ಲಿ ಅಂತ್ಯವಾಗಿದೆ.
ಇದನ್ನೂ ಓದಿ : ರಘುನಾಥ ದೇವಸ್ಥಾನದಲ್ಲಿ ರಾಮನವಮಿ ಉತ್ಸವ ನಾಳೆಯಿಂದ
ಭಟ್ಕಳ ಮೂಲದ ಗಿರಿಜಾ (30) ಕೊಲೆಯಾದವರು. ಗಿರಿಜಾಳನ್ನು ಉಸಿರುಗಟ್ಟಿಸಿ ಪತಿ ನವೀನ್ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಎಚ್ಎಎಲ್ ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ಈ ಘಟನೆ ನಡೆದಿದೆ. ಕಳೆದ ಏಪ್ರಿಲ್ 12ರಂದು ಮಗು ಮಾಡಿಕೊಳ್ಳುವ ವಿಚಾರಕ್ಕೆ ಮತ್ತೆ ಗಲಾಟೆ ನಡೆದಿದೆ. ಸಿಟ್ಟಿನಲ್ಲಿ ಪತ್ನಿ ಗಿರಿಜಾ ಮಲಗಿರುವಾಗ ನವೀನ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಗಿರಿಜಾ ಮತ್ತು ನವೀನ್ ಕಳೆದ ಎಂಟು ತಿಂಗಳ ಹಿಂದಷ್ಟೇ ಮದುವೆ ಆಗಿದ್ದರು. ಇತ್ತೀಚೆಗೆ ಗರ್ಭಿಣಿಯಾಗಿದ್ದ ಗಿರಿಜಾಗೆ ಗರ್ಭಪಾತ ಆಗಿತ್ತು. ಗರ್ಭಪಾತ ಆಗಿದ್ದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಗಿರಿಜಾ, ಸದ್ಯಕ್ಕೆ ಮಗು ಬೇಡ ಅಂದಿದ್ದಳು. ಆದರೆ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ- ಹೆಂಡತಿ ನಡುವೆ ಸದಾ ಗಲಾಟೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.
ಇದನ್ನೂ ಓದಿ : ಕಾಂಗ್ರೆಸ್ ಪಕ್ಷ ಇದ್ದಾಗ ದೇಶದಲ್ಲಿ ಬಾಂಬ್ ಬ್ಲಾಸ್ಟ್ : ಚಕ್ರವರ್ತಿ ಸೂಲಿಬೆಲೆ