ಕಾರವಾರ : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ವೀಕ್ಷಕರಾದ ರಾಜೀವ ರತನ್ ಅವರ ಸಮ್ಮುಖದಲ್ಲಿ ಶನಿವಾರ ನಾಮಪತ್ರಗಳ ಪರಿಶೀಲನೆ ನಡೆಯಿತು. ಈಗಾಗಲೇ ನಾಮಪತ್ರಗಳನ್ನು ಸಲ್ಲಿಸಿದ್ದ ೬ ಅಭ್ಯರ್ಥಿಗಳ ಒಟ್ಟು ೧೭ ನಾಮಪತ್ರಗಳು ತಿರಸ್ಕೃತಗೊಂಡಿವೆ. ನಾಮಪತ್ರಗಳ ಪರಿಶೀಲನೆಯ ನಂತರ ೧೩ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ.
ಇದನ್ನೂ ಓದಿ : ಸಮುದ್ರದಲ್ಲಿ ಬೋಟ್ ಮುಳುಗಡೆ; ನಾಲ್ವರ ರಕ್ಷಣೆ
ನಾಮಪತ್ರ ತಿರಸ್ಕೃತಗೊಂಡವರ ವಿವರ : ರಾಷ್ಟ್ರೀಯ ಜನ ಸಂಭಾವನಾ ಪಕ್ಷದ ನಾಗರಾಜ ಶ್ರೀಧರ್ ಶೇಟ್, ಪಕ್ಷೇತರ ಆಭ್ಯರ್ಥಿಗಳಾದ ರೂಪಾ ನಾಯ್ಕ್, ಉಮೇಶ್ ದೈವಜ್ಞ, ಮಡಗಾಂವಕರ್ ಪ್ರಮೋದ್, ಸುಜಯ್ ಸುಧೀರ್ ಗೋಕರ್ಣ ಮತ್ತು ಪ್ರಕಾಶ್ ಪಿಂಟೋ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.
ಕ್ರಮಬದ್ದವಾಗಿ ನಾಮಪತ್ರ ಸಲ್ಲಿಸಿರುವವರ ವಿವರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್, ಭಾರತೀಯ ಜನತಾ ಪಾರ್ಟಿಯ ಕಾಗೇರಿ ವಿಶ್ವೇಶ್ವರ ಹೆಗಡೆ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದ ಗಣಪತಿ ಹೆಗಡೆ, ಕರ್ನಾಟಕ ರಾಷ್ಟ್ರ ಸಮಿತಿಯ ವಿನಾಯಕ ಮಂಗೇಶ ನಾಯ್ಕ್, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್, ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣಾಜಿ ಪಾಟೀಲ್, ಚಿದಾನಂದ ಹನುಮಂತಪ್ಪ ಹರಿಜನ, ನಿರಂಜನ್ ಉದಯಸಿನ್ಹಾ ಸರ್ದೇಸಾಯಿ, ನಾಗರಾಜ ಅನಂತ ಶಿರಾಲಿ, ಅರವಿಂದ ಗೌಡ, ಅವಿನಾಶ್ ನಾರಾಯಣ ಪಾಟೀಲ, ಕೃಷ್ಣ ಹನುಮಂತಪ್ಪ ಬಳೆಗಾರ, ರಾಜಶೇಖರ ಶಂಕರ ಹಿಂಡಲಗಿ ಸೇರಿದಂತೆ ಒಟ್ಟು ೧೩ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ನಾಮಪತ್ರಗಳ ಪರಿಶೀಲನೆ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಯಾಗಿರುವ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಮತ್ತು ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ಉಪಸ್ಥಿತರಿದ್ದರು.
ಏಪ್ರಿಲ್ ೨೨ ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ ೭ ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.