ರಿಪ್ಪನಪೇಟೆಯಲ್ಲಿ ಗೃಹಣಿ ಆತ್ಮಹತ್ಯ
ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದಾರೆ.

ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದರು.

ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ ರವರಿಗೆ ಐದು ವರ್ಷದ ಮಗನಿದ್ದು ತಾಯಿ ಮನೆಯಲ್ಲಿ ಬಿಟ್ಟಿದ್ದಾರೆ.

ಮಂಗಳವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ
ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಕೊಂಡಿದ್ದಾರೆ. ನಿನ್ನೆಯಿಂದ ಫೋನ್ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಅವರ ಸ್ನೇಹಿತೆಯರು ಇಂದು ಮನೆಯ ಬಳಿ ನೋಡಲು ಹೋದಾಗ ನೇಣು ಬಿಗಿದುಕೊಂಡಿರುವ ವಿಚಾರ ಗೊತ್ತಾಗಿದೆ.ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.