ಭಟ್ಕಳ : ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ಶ್ರೀ ಚಿತ್ರಾಪುರ ಮಠದ ಶ್ರೀ ಭವಾನಿಶಂಕರ ದೇವರ ಮಹಾರಥೋತ್ಸವ ಮಂಗಳವಾರ ಸಂಜೆ ನಡೆಯಿತು.

ಇದನ್ನೂ ಓದಿ : ಸಾರದಹೊಳೆ ಹನುಮಂತ ದೇವರ ವರ್ಧಂತ್ಯೋತ್ಸವಕ್ಕೆ ಚಾಲನೆ

ರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏ.೧೮ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಧ್ವಜಾರೋಹಣದೊಂದಿಗೆ ಆರಂಭಗೊಂಡಿತು. ಮಧ್ಯಾಹ್ನ ೧೨ ಗಂಟೆಗೆ ರಥಾರೋಹಣ ಕಾರ್ಯಕ್ರಮ ನಡೆಯಿತು. ಸಂಜೆ ೫.೩೦ ಗಂಟೆಗೆ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಮಹಾರಥೋತ್ಸವ ಜರುಗಿತು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್  ಫಾಲೋವ್ ಮಾಡಲು ಇಲ್ಲಿ ಒತ್ತಿ.

ರಥೋತ್ಸವದ ನಿಮಿತ್ತ ಭಕ್ತರು ಬೆಳಿಗ್ಗೆಯಿಂದಲೇ ಶ್ರೀ ಮಠಕ್ಕೆ ಆಗಮಿಸಿ ಶ್ರೀ ದೇವರ ಹಾಗೂ ಶ್ರೀಗಳ ದರ್ಶನವನ್ನು ಪಡೆದು ನಂತರ ರಥ ಕಾಣಿಕೆ ಸಲ್ಲಿಸಿದರು. ರಥೋತ್ಸವದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಧಾನ ವ್ಯವಸ್ಥಾಪಕ ನಾರಾಯಣ ಮಲ್ಲಾಪುರ ಸೇರಿದಂತೆ ಶ್ರೀ ಮಠದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಭಕ್ತರು, ಚಿತ್ರಾಪುರ ಊರಿನ ಗಣ್ಯರು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು.