ಹೊನ್ನಾವರ : ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಮೋದಿ ಸರಕಾರ ಕೇವಲ ಸುಳ್ಳು ಹೇಳಿ ಕಾಲಹರಣ ಮಾಡಿದ್ದು ಬಿಟ್ಟರೆ, ದೇಶಕ್ಕೆ ಯಾವುದೇ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ನುಡಿದರು. ಅವರು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ಕುರಿತಂತೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ : ಹಿಂದೂ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿ ವಿರುದ್ಧ ನೇರ ಕ್ರಮಕ್ಕೆ ಆಗ್ರಹ
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಜಿಲ್ಲೆಯಾದ್ಯಂತ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಪ್ರವಾಸ ಕೈಗೊಳ್ಳಲಾಗಿದೆ. ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ವಾತಾವರಣವಿದೆ ಎಂದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ, ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ ನಾಯ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಮಹೇಶ್, ಬಿಸಿಸಿ ಪ್ರಧಾನ ಕಾರ್ಯದರ್ಶಿ ಸುರೇಶ ಮೇಸ್ತ ಮುಂತಾದವರು ಉಪಸ್ಥಿತರಿದ್ದರು.