ಕುಂದಾಪುರ : ಇಲ್ಲಿನ ಹೊಸ ಬಸ್ ನಿಲ್ದಾಣದ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ೨೩ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಮೇ ೧ರಂದು ಜರುಗಲಿರುವುದು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಅಂದು ಬೆಳಿಗ್ಗೆ ೯ಕ್ಕೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಪುಣ್ಯಾಹ, ಬ್ರಹ್ಮಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ ನಡೆಯಲಿದೆ. ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯುವುದು. ಬಳಿಕ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಪ್ರತಿಷ್ಠಾ ವರ್ಧಂತಿ ಮಹೋತ್ಸವಕ್ಕೆ ಭಕ್ತರು ಆಗಮಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಸುಬ್ರಹ್ಮಣ್ಯ ಧಾರೇಶ್ವರ ಯಕ್ಷರಂಗದ ಅಪ್ರತಿಮ ಭಾಗವತ – ವಿ.ಕೆ.ಭಟ್