ಹೊನ್ನಾವರ: ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನ ವಿದ್ಯಾರ್ಥಿ ಒಕ್ಕೂಟ ಹಾಗೂ ಯುಥ್ ರೆಡ್ಕ್ರಾಸ್ ಘಟಕದ ಆಶ್ರಯದಲ್ಲಿ ‘ಪವಾಡ ಬಯಲು’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಡಾ.ಹುಲಿಕಲ್ ನಟರಾಜ್, ಪ್ರಾತ್ಯಕ್ಷಿಕೆಗಳ ಮೂಲಕ ವೈಜ್ಞಾನಿಕ ಹಿನ್ನೆಲೆಯನ್ನು ವಿವರಿಸಿ ಪವಾಡದ ರಹಸ್ಯಗಳನ್ನು ಅವರು ಬಿಚ್ಚಿಟ್ಟರು. ಪಿ.ವಿ.ಸಿದ್ದಲಿಂಗಮ್ಮ ಸಹಕರಿಸಿದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಈ ಸಂದರ್ಭ ಮಾತನಾಡಿದ ಅವರು, ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ವದ ಆವಿಷ್ಕಾರಗಳಾಗಿರುವ ಆಧುನಿಕ ಕಾಲಘಟ್ಟದಲ್ಲೂ ವೈಜ್ಞಾನಿಕ ಮನೋಭಾವದ ಕೊರತೆ ಕಾಡುತ್ತಿರುವುದು ವಿಪರ್ಯಾಸದ ಸಂಗತಿ’ ಎಂದು ವಿಷಾದ ವ್ಯಕ್ತಪಡಿಸಿದರು.
ಇದನ್ನೂ ಓದಿ : ಚಿನ್ನದ ಅಂಗಡಿ ಶಟರ್ ಮುರಿದು ಚಿನ್ನಾಭರಣ ಕಳವು
ನಂಬಿಕೆ, ಆಚರಣೆಗಳು ಹಾಗೂ ಮೂಢನಂಬಿಕೆಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿಯಬೇಕಿದೆ. ಧರ್ಮ ಬೀದಿಗೆ ಬಂದಿದೆ. ಭಯ, ಆತಂಕ ಜನರಲ್ಲಿ ಮನೆ ಮಾಡಿದೆ. ಶೂನ್ಯದಿಂದ ಸೃಷ್ಟಿ ಸಾಧ್ಯವಿಲ್ಲ ಎನ್ನುವ ವೈಜ್ಞಾನಿಕ ಸತ್ಯವನ್ನು ಮನಗಾಣಬೇಕಿದೆ. ವ್ಯಕ್ತಿ ಪೂಜೆ ಹಾಗೂ ಎಲ್ಲವನ್ನೂ ನಂಬುವ ಬೋಳೆ ಸ್ವಭಾವ ಬಿಡಬೇಕು. ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಟ-ಮಂತ್ರಗಳ ಮೂಲಕ ಜನರನ್ನು ಮೋಸ ಮಾಡುತ್ತಿರುವ ಬಹಳಷ್ಟು ಪ್ರಕರಣಗಳು ನಡೆಯುತ್ತಿರುವ ಸಂಗತಿ ತಿಳಿದಿದ್ದೇನೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಪವಾಡ ಬಯಲು ಕಾರ್ಯಕ್ರಮ ಪ್ರಸ್ತುತಪಡಿಸಿದ್ದೇನೆ. ಮುಂದಿನ ದಿನಗಳಲ್ಲಿ ಜನರಲ್ಲಿ ಅರಿವು ಮೂಡಿಸಲು ನಮ್ಮ ಪರಿಷತ್ ವತಿಯಿಂದ ಹೆಚ್ಚಿನ ಕಾರ್ಯಕ್ರಮಗಳನ್ನು ಸಂಘಟಿಸುವ ಯೋಜನೆ ಇದೆ’ ಎಂದು ಅವರು ತಿಳಿಸಿದರು.
ಪ್ರಾಚಾರ್ಯೆ ಡಾ.ರೇಣುಕಾದೇವಿ ಗೋಳಿಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿಹಾರಿಕಾ ಭಟ್ಟ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು.ಯುಥ್ ರೆಡ್ಕ್ರಾಸ್ ಘಟಕದ ಸಂಚಾಲಕ ಡಾ.ಎಂ.ಜಿ.ಹೆಗಡೆ ಸ್ವಾಗತಿಸಿದರು. ಹಿರಿಯ ಪ್ರಾಧ್ಯಾಪಕ ಡಾ.ಡಿ.ಎಲ್.ಹೆಬ್ಬಾರ, ಪ್ರಧಾನ ಕಾರ್ಯದರ್ಶಿ ಜೀವನ್ ಶೆಟ್ಟಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಡಾ.ಜಿ.ಎನ್.ಭಟ್ಟ ವಂದಿಸಿದರು.