ಕುಮಟಾ: ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-೨೦೨೪ ರಲ್ಲಿ ತಾಲೂಕಿನ ಮೂರೂರು ಗ್ರಾಮದ ಸುಪ್ರಿಯಾ ಶಂಕರ ಗೌಡ ೬೦೦ ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ೧೦೦ ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.

ಇದನ್ನೂ ಓದಿ : ನ್ಯಾ. ಪ್ರವೀಣ ಆರ್. ನಾಯ್ಕ ಅವರಿಗೆ ವಕೀಲರ ಸಂಘದಿಂದ ಸನ್ಮಾನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಮೇ ೩ರಂದು ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಈ ಕ್ರೀಡಾಕೂಟ ನಡೆಸಿತ್ತು. ಸ ಮೂರೂರಿನ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸುಪ್ರಿಯಾ ೯ನೇ ತರಗತಿಯಲ್ಲಿ ಓದುತ್ತಿದ್ದಾಳೆ. ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿನಿ ಸುಪ್ರಿಯಾ ಶಂಕರ ಗೌಡ ಶಾಲೆಗೆ ಕೀರ್ತಿ ತಂದಿದ್ದಾಳೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.