ಭಟ್ಕಳ: ತಾಲೂಕಿನ ಶಿರಾಲಿಯ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೧೦೦% ಫಲಿತಾಂಶ ಗಳಿಸಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಮೋನಿಕಾ ಜಯಕರ ನಾಯ್ಕ ೯೭.೧೨% ಅಂಕ ಪಡೆಯುವುದರೊಂದಿಗೆ ಶಾಲೆಗೆ ಪ್ರಥಮ, ಶಾರದಾ ವೆಂಕಟೇಶ ದೇವಡಿಗ ೯೪.೫೬% ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಧವನ ಮಂಜುನಾಥ ನಾಯ್ಕ ೯೨.೩೨% ಅಂಕ ಪಡೆಯುವುದರೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ : ವಿಶ್ವದರ್ಶನ ಪ್ರೌಢಶಾಲೆಗಳ ಉತ್ತಮ ಸಾಧನೆ; ಹರಿಪ್ರಕಾಶ ಕೋಣೆಮನೆ ಸಂತಸ
ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆಯ ಒಟ್ಟು ಈ ಬಾರಿ ೧೧೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ ೧೪ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೮೮ ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ೧೩ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಥಮ ಭಾಷಾ ವಿಷಯ ಕನ್ನಡದಲ್ಲಿ ಅಂಕಿತ ಮಹೇಂದ್ರ ನಾಯ್ಕರ ಮತ್ತು ಇಂಚರಾ ಶ್ರೀನಿವಾಸ ಮೊಗೇರ ೧೨೫/೧೨೫ ಅಂಕ ಹಾಗೂ ಸಮಾಜ ವಿಜ್ಞಾನದಲ್ಲಿ ಅಂಕಿತ ಮಹೇಂದ್ರ ನಾಯ್ಕರ್ ೧೦೦/೧೦೦ ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಸಾಧನೆಗೈದ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯಾಧ್ಯಾಪಕಿ ಮಮತಾ ಎಮ್. ಭಟ್ಕಳ್, ಶಿಕ್ಷಕ ವೃಂದ, ಶಾಲಾ ಆಡಳಿತ ಮಂಡಳಿಯವರಾದ ಶ್ರೀ ಚಿತ್ರಾಪುರ ಮಠದ ಪದಾಧಿಕಾರಿಗಳು, ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪಾಲಕರು ಹಾಗೂ ಊರ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.