ಭಟ್ಕಳ : ತಾಲೂಕಿನ ಪ್ರಸಿದ್ಧ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ವರ್ಧಂತಿ ಉತ್ಸವ ಶುಕ್ರವಾರ(ಮೇ ೧೦) ಸಂಪನ್ನಗೊಂಡಿತು. ಶ್ರೀ ದೇವಿಯ ೫೦ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ ಉತ್ಸವ ಇದಾಗಿತ್ತು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ವರ್ಧಂತಿ ಉತ್ಸವ ಅಂಗವಾಗಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ ಪುಣ್ಯಾಹ ವಾಚನ, ಶತ ಕುಂಭಾಭಿಷೇಕ, ಪಂಚದುರ್ಗಾ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಮಧ್ಯಾಹ್ನ ಮಹಾಮಂಗಳಾರತಿ, ಮಹಾ ಅನ್ನಸಂತರ್ಪಣೆ ನಡೆಯಿತು.
ಇದನ್ನೂ ಓದಿ : ವರ್ಧಂತಿ ಉತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ ೧೧ರಿಂದ
ಸಾವಿರಾರು ಭಕ್ತರು ವರ್ಧಂತಿ ಉತ್ಸವದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ, ಹರಕೆ ಸಲ್ಲಿಸಿದರು. ವರ್ಧಂತಿ ಉತ್ಸವದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಚಿನ್ನಾಭರಣ ಮತ್ತು ಮಲ್ಲಿಗೆ ಹೂವಿನಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಸಂಜೆ ೪.೩೦ರಿಂದ ಮಹಿಳೆಯರಿಂದ ಲಲಿತ ಸಹಸ್ರನಾಮ ಪಠಣ, ಸಂಜೆ ೬ ಗಂಟೆಗೆ ಭಜನಾ ಕಾರ್ಯಕ್ರಮ ನಡೆಯಿತು.
ವರ್ಧಂತಿ ಉತ್ಸವದಲ್ಲಿ ದೇವಸ್ಥಾನದ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ, ಧರ್ಮದರ್ಶಿಗಳಾದ ನಾರಾಯಣ ದೈಮನೆ, ಹನುಮಂತ ನಾಯ್ಕ, ಅರವಿಂದ ಪೈ, ಮಾರಿ ಜಾತ್ರಾ ಮಹೋತ್ಸವದ ಅಧ್ಯಕ್ಷ ರಾಮಾ ಮೊಗೇರ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಶ್ರೀ ಕೃಷ್ಣ ಜನ್ಮ ಕಂಸವಧೆ ಯಕ್ಷಗಾನ ಪ್ರದರ್ಶನ ಜರುಗಲಿದೆ.