ಭಟ್ಕಳ: ಮಂಗಳವಾರ ಸಂಜೆ ಗುಡುಗು ಮಿಂಚು ಸಹಿತ ಗಾಳಿ ಮಳೆಗೆ ತಾಲೂಕಿನ ಹೆಬಳೆ ಗ್ರಿಡ್ ನಲ್ಲಿ ಪರಿವರ್ತಕ ವಿಫಲಗೊಂಡ ಹಿನ್ನೆಲೆಯಲ್ಲಿ ಶುಕ್ರವಾರದವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ : ಮನೆಯೊಳಗೆ ನುಗ್ಗಿದ ಮಳೆ ನೀರು, ಕತ್ತಲಲ್ಲಿ ಭಟ್ಕಳ
ಮಂಗಳವಾರ ಸಂಜೆ ಒಂದು ಗಂಟೆ ಕಾಲ ಸುರಿದ ಮಳೆಗೆ ತಾಲೂಕಿನ ವಿವಿಧೆಡೆ ಮರಗಳು ನೆಲಕ್ಕುರುಳಿವೆ. ತಾಲೂಕಿನ ಹೆಬಳೆಯಲ್ಲಿರುವ ವಿದ್ಯುತ್ ಸರಬರಾಜು ಕೇಂದ್ರದಲ್ಲಿ ಪರಿವರ್ತಕ ವಿಫಲಗೊಂಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿಯಿಂದ ಹೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿದ್ದೆ ಬಿಟ್ಟು ತಾಲೂಕಿಗೆ ವಿದ್ಯುತ್ ವಿತರಿಸಲು ಕೆಲಸ ಮಾಡುತ್ತಿದ್ದಾರೆ. ಆದರೆ ಶುಕ್ರವಾರದವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಭಟ್ಕಳದ ಹನೀಫಾಬಾದ್, ಕಾರಗದ್ದೆ, ನವಾಯತ್ ಕಾಲೋನಿ, ಡಿಪಿ ಕಾಲೋನಿ, ನಾಗಪ್ಪ ನಾಯಕ ರಸ್ತೆ, ಸಾಗರ ರಸ್ತೆ, ಕಡವಿನಕಟ್ಟೆ, ಉಸ್ಮಾನ್ ನಗರ, ಮುಟ್ಟಳ್ಳಿ, ಪುರವರ್ಗ, ಸರ್ಪನಕಟ್ಟೆ, ಭಟ್ಕಳ ಮಾರ್ಕೆಟ್, ವಿ.ಟಿ. ರಸ್ತೆ, ಸೋನಾರಕೇರಿ, ತೆಂಗಿನಗುಂಡಿ ಕ್ರಾಸ್, ಹೊಂಡದಕೇರಿ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.