ಭಟ್ಕಳ: ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಮುಟ್ಟಳ್ಳಿ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಬ್ರಿಡ್ಜ್ ಸಮೀಪ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇನಾಯತುಲ್ಲಾ ರಸೂಲಸಾಬ್ ಬಂಧಿತ ಆರೋಪಿ. ಈತ 8 ಸಾವಿರ ರೂ. ಮೌಲ್ಯದ 210 ಗ್ರಾಂ ಗಾಂಜಾ ಮಾದಕ ಪದಾರ್ಥವನ್ನು ಯಾವುದೇ ಪರವಾನಗಿ ಇಲ್ಲದೇ ಮಾರಾಟ ಮಾಡುವ ಉದ್ದೇಶದಿಂದ
ಬೈಕ್ ನಲ್ಲಿ ಸಾಗಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಈ ವೇಳೆ ಪೊಲೀಸರು ದಾಳಿ ಮಾಡಿದ್ದು, ಗಾಂಜಾ ಸಹಿತ ಒಂದು ಮೊಬೈಲ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ