ಭಟ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬಳೆ ವಲಯ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಜಾಲಿ, ಸರಕಾರಿ ಪ್ರೌಢಶಾಲೆ ಜಾಲಿ ಇವರ ಸಹಯೋಗದೊಂದಿಗೆ ಜಾಲಿಯ ನಾಮಧಾರಿ ಸಭಾಭವನದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಅಧ್ಯಕ್ಷತೆಯನ್ನು ನಿವೃತ್ತ ಸರಕಾರಿ ನೌಕರ ಮಾಸ್ತಿ ಗೊಂಡ ವಹಿಸಿದ್ದರು. ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಶಾಂತರಾಮ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಗಣೇಶ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜಾಲಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಕುಮಾರ, ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಸರಕಾರಿ ಪ್ರೌಢಶಾಲೆ ಶಿಕ್ಷಕ ಶ್ರೀಧರ ಶೇಟ ತಂಬಾಕು ವಿರೋಧಿ ದಿನಾಚರಣೆ ಕುರಿತು ಮಾಹಿತಿ ನೀಡಿದರು.
ಇದನ್ನೂ ಓದಿ : ಭಾರತೀಯ ಜನತಾ ಪಾರ್ಟಿ, ಹಿಂದೂ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ
ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಈ ಕಾರ್ಯಕ್ರಮದಲ್ಲಿ ಜಾಲಿ ಪಟ್ಟಣ ಪಂಚಾಯತ ಮಾಜಿ ಸದಸ್ಯ ಪುರಂದರ ಮೊಗೇರ, ಪ್ರೌಢಶಾಲಾ ಶಿಕ್ಷಕಿ ಶೋಭಾ, ಯೋಗ ಗುರು ಗೋವಿಂದ ಉಪಸ್ಥಿತರಿದ್ದರು. ಜಾಲಿ ಒಕ್ಕೂಟದ ಸದಸ್ಯರು, ಜಾಲಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಲಯದ ಮೇಲ್ವಿಚಾರಕಿ ಸುಶೀಲ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಸುಜಾತ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಸುಶೀಲ ವಂದಿಸಿದರು.
ಇದನ್ನೂ ಓದಿ : ಭಟ್ಕಳದಲ್ಲಿ ಅಕ್ರಮವಾಗಿ ಗೋ ಸಾಗಾಟ: ಬಿಜೆಪಿ ಆರೋಪ