ಭಟ್ಕಳ: ಬಾಯಿ ಮತ್ತು ಹಲ್ಲುಗಳ ಆರೋಗ್ಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ಕ್ರಾಸ್ ಘಟಕ, ಎನ್.ಎಸ್.ಎಸ್.ಘಟಕ, ಸಾವಿತ್ರಿ ಸ್ಪೆಷಾಲಿಟಿ ಡೆಂಟಲ್ ಕೇರ್ ಭಟ್ಕಳ, ರೋಟರಿ ಕ್ಲಬ್ ಹೊಸಂಗಡಿ-ಸಿದ್ದಾಪುರ ಘಟಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನಾಗೇಶ ಶೆಟ್ಟಿ ಮಾತನಾಡಿ, ಪ್ರತಿಯೋರ್ವರೂ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ನಮ್ಮ ಬಾಯಿ ಮತ್ತು ಹಲ್ಲುಗಳ ಕುರಿತು ತಿಳಿದುಕೊಂಡು ಅವುಗಳ ಆರೋಗ್ಯ ಕಾಪಾಡಿಕೊಳ್ಳುವತ್ತ ಯುವಜನತೆ ಮುಂದಾಗಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ : ಏಕವಲಯ ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ
ವಿಶೇಷ ಉಪನ್ಯಾಸಕಿಯಾಗಿ ಉಪಸ್ಥಿತರಿದ್ದ ಸಾವಿತ್ರಿ ಸ್ಪೆಷಾಲಿಟಿ ಡೆಂಟಲ್ ಕೇರ್ ನ ಡಾ. ನಮ್ರತಾ ನಾಯ್ಕ ಮಾತನಾಡಿದರು. ಯುವಜನತೆ ತಂಪು ಪಾನೀಯವನ್ನು ಯಥೇಚ್ಛವಾಗಿ ಕುಡಿಯುವ ಮೂಲಕ ತಮ್ಮ ಹಲ್ಲಿನ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ತಂಪು ಪಾನೀಯದಿಂದ ಹಲ್ಲಿನ ಆರೋಗ್ಯಕ್ಕೆ ಹಾನಿಯಾಗುತ್ತದೆ. ಅದನ್ನು ಅರಿತು ಹಿತಮಿತವಾಗಿ ಸೇವಿಸಬೇಕು. ಹಲ್ಲಿನ ಆರೋಗ್ಯದ ಕುರಿತಂತೆ ಕಾಲಕಾಲಕ್ಕೆ ಸರಿಯಾಗಿ ಹಲ್ಲಿನ ಆರೋಗ್ಯ ಪರೀಕ್ಷೆ ಮಾಡಿಕೊಳ್ಳುವುದು ಕೂಡ ಅಗತ್ಯವಾಗಿದೆ. ಹಲ್ಲಿನ ಆರೋಗ್ಯ ರಕ್ಷಣೆಗೆ ಇದು ಸಹಕಾರಿಯಾಗುವುದು. ಕೆಲವೊಮ್ಮೆ ನಾವು ನಿರ್ಲಕ್ಷ್ಯ ಮಾಡಿದಾಗ ಹಲ್ಲುಗಳನ್ನೇ ಕೀಳಬೇಕಾದ ಪರಿಸ್ಥಿತಿ ಬರಬಹುದು. ಆಗಾಗ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಇದನ್ನು ತಪ್ಪಿಸಲು ಸಾಧ್ಯ ಎಂದರು. ಹಲ್ಲುಗಳ ಆರೋಗ್ಯ ರಕ್ಷಣೆಯ ಕುರಿತು ಪ್ರಾತ್ಯಕ್ಷಿತೆಯ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
ಇದನ್ನೂ ಓದಿ : ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿ, ಬಸ್ ನಿಲ್ದಾಣಕ್ಕೆ ಮುತ್ತಿಗೆ
ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಘಟಕದ ಸಂಚಾಲಕಿ ವೈಶಾಲಿ ಜಿ.ಆರ್., ವಿದ್ಯಾರ್ಥಿ ಪ್ರತಿನಿಧಿ ಪ್ರಸನ್ನ ಉಪಸ್ಥಿತರಿದ್ದರು. ತೃತಿಯ ಬಿ.ಎ. ವಿದ್ಯಾರ್ಥಿನಿ ರೂಪ ಪ್ರಾರ್ಥಿಸಿದರು. ದ್ವಿತೀಯ ಬಿ.ಎ. ವಿದ್ಯಾರ್ಥಿಗಳಾದ ವೀಣಾ ನಾಯ್ಕ ಸ್ವಾಗತಿಸಿದರು. ವಿಜೇತ ನಾಯ್ಕ ನಿರೂಪಿಸಿದರು. ಚೈತ್ರ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಪಾಲ್ಗೊಂಡಿದ್ದರು.