ಶಿವಮೊಗ್ಗ : ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಹೃದಯಾಘಾತವಾಗಿತ್ತು.
ವಿಡಿಯೋ ನೋಡಿ : ಪ್ರತಿಭಟನೆ ವೇಳೆ ಹೃದಯಾಘಾತದಿಂದ ಸಾವು
ನಗರದ ಗೋಪಿ ಸರ್ಕಲ್ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನುಪ್ರಕಾಶ್ ಅವರಿಗೆ ತೀವ್ರ ಹೃದಯಾಘಾತ (Cardiac Arrest) ಸಂಭವಿಸಿದೆ. ಪ್ರತಿಭಟನೆ ಮುಗಿಸಿ ವಾಪಸ್ಸಾಗುವ ಸಂದರ್ಭದಲ್ಲಿ ಅವರು ತೀವ್ರ ಅಸ್ವಸ್ಥಗೊಂಡರು. ಕೂಡಲೆ ಅವರನ್ನು ಸ್ಥಳದಲ್ಲಿದ್ದ ಶಾಸಕ ಚನ್ನಬಸಪ್ಪ ಮತ್ತಿತರರು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ ಮಾರ್ಗಮಧ್ಯದಲ್ಲೇ ಭಾನುಪ್ರಕಾಶ್ ಅವರು ಕೊನೆಯುಸಿರೆಳೆದಿದ್ದಾರೆ.
ವಿಡಿಯೋ ನೋಡಿ : ಸಾವಿಗೂ ಮುನ್ನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನುಪ್ರಕಾಶ
ಇದನ್ನೂ ಓದಿ : ಸಚಿನ್ ಮಹಾಲೆ ಅವರಿಗೆ ಬಿಜೆಪಿಯಿಂದ ಶ್ರದ್ಧಾಂಜಲಿ