ಭಟ್ಕಳ: ಶಿರಾಲಿ ಸಾರದಹೊಳೆಯ ಹಳೆಕೋಟೆ ಹನುಮಂತ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಸ್ಥೆಯ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ೧೧ನೇ ವರ್ಷದ ಪುಸ್ತಕ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ನಾಮಧಾರಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ರಾಮಚಂದ್ರ ನಾಯ್ಕ ಯಲ್ಲಾಪುರ, ತಾಲೂಕಿನಲ್ಲಿ ಸತತ ೧೧ ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿದ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಇದನ್ನೂ ಓದಿ : ಚಲಿಸುತ್ತಿದ್ದ ಬೈಕಿಗೆ ಕಾರೊಂದು ಡಿಕ್ಕಿಯಾಗಿ ಸವಾರ ಸಾವು

ವಿದ್ಯಾರ್ಥಿಗಳು ಸಮಾಜದ ಸಂಸ್ಥೆಗಳಿಂದ ಪಡೆದ ಸಹಾಯವನ್ನು ತಾವು ಮುಂದೆ ಅದನ್ನು ಸಮಾಜಕ್ಕೆ ಹಿಂತಿರಿಗಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯೆಯು ಯಾರ ಸೊತ್ತಲ್ಲ. ಕಷ್ಟಪಟ್ಟು ಪಡೆದರೆ ಅದನ್ನು ಯಾರಿಂದಲೂ ಕಸಿಯಲು ಸಾದ್ಯವಿಲ್ಲ. ತಾವು ಪಡೆದ ವಿದ್ಯೆಯನ್ನು ಉತ್ತಮ ಕಾರ್ಯಕ್ಕೆ ಬಳಸಿ, ಮನೆಗೆ ಉತ್ತಮ ಮಗನಾಗಿ, ಊರಿಗೆ ಉಪಕಾರಿಯಾಗುವ ಗುಣ ನಾವು ರೂಢಿಸಿಕೊಳ್ಳಬೇಕಾಗಿದೆ. ವ್ಯಸನಮುಕ್ತ ಸಮಾಜ ನಮ್ಮದಾಗಬೇಕು. ವಿದ್ಯಾರ್ಥಿಗಳು ಉತ್ತಮ ವಿದ್ಯೆಯನ್ನು ಪಡೆದು ಸುಂದರ ಬದುಕನ್ನು ಕಟ್ಟಿಕೊಳ್ಳಲು ಸಂಕಲ್ಪ ಮಾಡಬೇಕು. ನಮಗೆ ಸಹಾಯ ಮಾಡಿದವರನ್ನು ನೆನೆಯುವ ಕಾರ್ಯ ಯಾವತ್ತೂ ಮಾಡಿದರೆ ಸಮಾಜ ಅಂಥವರನ್ನು ನೆನೆಯುತ್ತದೆ ಎಂದರು.

ಇದನ್ನೂ ಓದಿ : ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಪುಸ್ತಕ ವಿರತಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಹಳೆಕೋಟೆ ಹನುಮಂತದ ದೇವಸ್ಥಾನದ ಅಧ್ಯಕ್ಷ ಆರ್. ಕೆ. ನಾಯ್ಕ ಮಾತನಾಡಿ, ಈ ಪವಿತ್ರ ಕ್ಷೇತ್ರದಲ್ಲಿ ವಿದ್ಯಾರ್ಜನೆ ಮಾಡುವ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ವಿಚಾರ. ಸಮಾಜದ ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ ಉನ್ನತ ಹುದ್ದೆ ಪಡೆಯುವಂತಾಗಬೇಕು. ಉನ್ನತ ಹುದ್ದೆ ಪಡೆದ ನಾವು ನಮ್ಮ ಪಾಲಕರನ್ನು ಮರೆಯಬಾರದು. ಸಮಾಜದ ಪ್ರತ್ರಿಯೊಬ್ಬನೂ ಇನ್ನೊಬ್ಬರಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಹಕರಿಸಬೇಕು ಎಂದರು.

ಇದನ್ನೂ ಓದಿ : ಕರಾವಳಿಗರಿಗೆ ಚಿರಪರಿಚಿತ ಎಂ ಬಿ ಭಾನುಪ್ರಕಾಶ

ಕಾರ್ಯಕ್ರಮದಲ್ಲಿದ್ದ ಜಿಲ್ಲಾ ವಿಶ್ರಾಂತ ನ್ಯಾಯಾಧೀಶ ರವಿ ಎಂ. ನಾಯ್ಕ ಮಾತನಾಡಿ, ಸಮಾಜದ ಕಾರ್ಯಕ್ರಮ ಮಾಡಬೇಕಾದರೆ ಅದರ ಹಿಂದೆ ಬಹಳಷ್ಟು ಶ್ರಮ ಇರುತ್ತದೆ. ಈ ಶ್ರಮಕ್ಕೆ ಪ್ರತಿಫಲವಾಗಿ ವಿದ್ಯಾರ್ಥಿಗಳು ಉತ್ತಮ ವಿದ್ಯೆ ಪಡೆದು ಉನ್ನತ ಸ್ಥಾನ ಹೊಂದಿ ಸಮಾಜಕ್ಕೆ ಹೆಸರು ತರುವಂತಾಗಬೇಕು ಎಂದರು.

ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ಕುಸಿದು ಬಿದ್ದ ಮಾಜಿ ಎಮ್ಮೆಲ್ಸಿ ನಿಧನ

ಹೊಟೇಲ್ ಉದ್ಯಮಿ ಮಂಜುನಾಥ ನಾಯ್ಕ, ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಕೆ.ಆರ್. ನಾಯ್ಕ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮನಮೋಹನ ನಾಯ್ಕ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ರಾಜ್ಯಕ್ಕೆ ೯ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿ ಶ್ರೇಯಸ್ ರವಿ ನಾಯ್ಕ ಹಾಗೂ ಅವರ ಪಾಲಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ರಾಜ್ಯಕ್ಕೆ ೯ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿ ಶ್ರೇಯಸ್ ರವಿ ನಾಯ್ಕ ಹಾಗೂ ಅವರ ಪಾಲಕರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ವೆಂಕಟೇಶ್ವರ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಕೆ.ಆರ್. ನಾಯ್ಕ, ಶಿಕ್ಷಣ ಪ್ರೇಮಿಗಳ ಸಂಘದ ರಾಘವೇಂದ್ರ ನಾಯ್ಕರನ್ನು ಗೌರವಿಸಿ ಸನ್ಮಾನಿಸಲಾಯಿತು.

ಇದನ್ನೂ ಓದಿ : ಸೋಲಾರ ಬೀದಿ ದೀಪ ಉದ್ಘಾಟನಾ ಕಾರ್ಯಕ್ರಮ

೩೦೦ಕ್ಕೂ ಅಧಿಕ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು. ಮಂಜುನಾಥ ನಾಯ್ಕ ಪ್ರಾರ್ಥನೆ ಹಾಡಿದರು. ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಜಗದೀಶ ನಾಯ್ಕ ಸ್ವಾಗತಿಸಿ, ವರದಿ ವಾಚನ ಮಾಡಿದರು. ಶಿಕ್ಷಕರಾದ ಗಂಗಾಧರ ನಾಯ್ಕ, ನಾರಾಯಣ ನಾಯ್ಕ ಹಾಗೂ ಪರಮೇಶ್ವರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ದೇವೇಂದ್ರ ನಾಯ್ಕ ವಂದನಾರ್ಪಣೆ ಮಾಡಿದರು.

ಇದನ್ನೂ ಓದಿ : ಸಾರ್ವತ್ರಿಕ ಚುನಾವಣೆಯ ಅರಿವು ಪಡೆದ ಶಾಲಾ ಮಕ್ಕಳು