ಕುಮಟಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕುಮಟಾ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಹೆಗಡೆ ವಲಯ ವತಿಯಿಂದ ಹೆಗಡೆಯ ಶ್ರೀ ಹೀರೆಬೀರ ದೇವಸ್ಥಾನದ ಸಭಾಭವನದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.

ಕಾರ್ಯಕ್ರಮ ಉದ್ಘಾಟಿಸಿದ ಜಾನಪದ ಸಂಪಾದಕ ಉದಯ ಮಡಿವಾಳ ಮಾತನಾಡಿ, ಸೃಷ್ಠಿಯ ನಿಯಮಗಳಿಗೆ ಮನುಷ್ಯ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದ್ದಾನೆ. ನೈಸರ್ಗಿಕ ಸಂಪನ್ಮೂಲಗಳ ಮಾಲಿನ್ಯದ ತತ್ಪರಿಣಾಮ ರೋಗಗ್ರಸ್ಥ ಸಮಾಜದ ಉಲ್ಬಣ. ಅಂತೆಯೇ ಮನುಕುಲಕ್ಕೆ ದೈಹಿಕ, ಸಾಮಾಜಿಕ ಹಾಗೂ ಮಾನಸಿಕ ಜೀವನದಲ್ಲಿ ಆಘಾತ ಉಂಟಾಗಲಿದೆ. ಹಸಿರೀಕರಣಕ್ಕೆ ನಾವೆಲ್ಲರೂ ಪಣತೊಡಬೇಕು. ಹಸಿರು ಸಮೃದ್ಧವಾದರೆ ಆರೋಗ್ಯವಂತ ಮನುಕುಲದ ಏಳಿಗೆ ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ : ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ; ಓರ್ವ ವಶಕ್ಕೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ದಿನೇಶ ನಾಯ್ಕ ಪ್ರಾಸ್ತಾವಿಕವಾಗಿ ಪರಿಸರ ಮಾಹಿತಿ ಕಾರ್ಯಕ್ರಮ ಕುರಿತು ಮಾತನಾಡಿದರು. ಒಕ್ಕೂಟದ ಅಧ್ಯಕ್ಷೆ ಮಂಗಲಾ ಮಹಾದೇವ ಗಾವಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಒಕ್ಕೂಟದ ಸಹ ಕಾರ್ಯದರ್ಶಿ ಸರೋಜಿನಿ ಮಹಾದೇವ ನಾಯ್ಕ, ಗ್ರಾಮ ಪಂಚಾಯತ ಸದಸ್ಯೆ ವಿದ್ಯಾ ಪ್ರಕಾಶ ಗೌಡ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಮಹಾಲಕ್ಷ್ಮಿ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

ಇದನ್ನೂ ಓದಿ : ಜೂನ್‌ ೧೮ರಂದು ರಾಜ್ಯದ ವಿವಿಧ ಜಿಲ್ಲೆಗಳ ಅಡಿಕೆ ಧಾರಣೆ