ಭಟ್ಕಳ : ಭಟ್ಕಳ : ಕರ್ನಾಟಕ ಸರಕಾರದ ಅಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲ್ಪಡುವ ಉಚಿತ ಮೊಬೈಲ್ ವಿತರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಅಂಗನವಾಡಿ ಕಾರ್ಯಕರ್ತೆಯರು ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡುತ್ತಿದ್ದಾರೆ. ಸಮಾಜಕ್ಕೆ ಅವರು ಕೊಟ್ಟ ಕೊಡುಗೆ ಅಪಾರ. ಇಂದಿನ ಮಕ್ಕಳನ್ನು ದೇಶದ ಭವಿಷ್ಯಕ್ಕೆ ಭದ್ರ ಬುನಾದಿಯನ್ನಾಗಿ ರೂಪಿಸುತ್ತಾರೆ ಎಂದು ಹೇಳಿದರು.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ನನ್ನ ಉದ್ದೇಶ ಸಮಾಜದ ಎಲ್ಲಾ ಕಟ್ಟಕಡೆಯ ವ್ಯಕ್ತಿಗೆ ಸರಕಾರದ ಎಲ್ಲಾ ಸೌಲಭ್ಯಗಳು ತಲುಪುವಂತಾಗಬೇಕು. ನಾನು ಕೆಲವೊಮ್ಮೆ ಅಧಿಕಾರಿಗಳಿಗೆ ಕಟುವಾಗಿ ಯಾವುದೇ ಮಾತನ್ನಾಡಿದರೂ ಅದು ಸಾರ್ವಜನಿಕರಿಗೆ ಒಳಿತನ್ನು ಮಾಡುವ ಉದ್ದೇಶ ಹೊಂದಿರುತ್ತದೆ. ಅಧಿಕಾರಿಗಳು, ಸಿಬ್ಬಂದಿ ಸಾರ್ವಜನಿಕರ ಸೇವೆಗಳನ್ನು ನಿಷ್ಠೆಯಿಂದ ಮಾಡಬೇಕು ಎನ್ನುವ ಉದ್ದೇಶವನ್ನು ಹೊಂದಿರುತ್ತದೆ. ಯಾರೂ ಅನ್ಯಥಾ ಭಾವಿಸುವ ಅಗತ್ಯ ಇಲ್ಲ. ಅಂಗನವಾಡಿ ಬಾಡಿಗೆ ಕಟ್ಟಡದಲ್ಲಿ ನಡೆಸುವಂತಿಲ್ಲ. ಸ್ವಂತ ಕಟ್ಟಡದಲ್ಲಿ ನಡೆಸುವಂತಾಗಬೇಕು ಎಂದು ನಾನು ಕೆಲವೊಮ್ಮೆ ಕಟುವಾಗಿ ಮಾತನಾಡಿದ್ದೇನೆ. ಅಂಗನವಾಡಿ ಕಾರ್ಯಕರ್ತೆಯರು ಬೇಸರಿಸಿಕೊಳ್ಳಬೇಡಿ. ನನ್ನ ಉದ್ದೇಶ ಅಂಗನವಾಡಿ ಮಕ್ಕಳು ಸುಖವಾಗಿರಬೇಕು. ಯಾವುದೇ ಕಷ್ಟ ಅನುಭವಿಸಬಾರದು ಎಂಬುವುದಾಗಿದೆ. ಸರಕಾರ ಅನುದಾನಗಳನ್ನು ಸಾಕಷ್ಟು ಬಿಡುಗಡೆ ಮಾಡುತ್ತಲೇ ಇದೆ. ಇಲ್ಲಿ ನಾವು ಸರಿಯಾಗಿ ಕೆಲಸ ಮಾಡಿ ಮಕ್ಕಳ ಅಭಿವೃದ್ಧಿಗೆ ಶ್ರಮಿಸೋಣ ಎಂದು ಹೇಳಿದರು.
ಇದನ್ನೂ ಓದಿ : ಅಳ್ವೆಕೋಡಿ ಕಿರುಬಂದರು ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಿದ್ಧ : ಮಂಕಾಳ ವೈದ್ಯ
ಇದಕ್ಕೂ ಮೊದಲು ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಮೊಬೈಲ್ ವಿತರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ, ತಹಶೀಲ್ದಾರ ನಾಯ್ಕಡ್, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಸುಶೀಲಾ ಮೊಗೇರ ಮುಂತಾದವರು ಉಪಸ್ಥಿತರಿದ್ದರು.