ಭಟ್ಕಳ: ಇಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವಾಗಲೇ ಆಯ ತಪ್ಪಿ ಸಿಮೆಂಟ್ ಕಂಬವನ್ನು ಮೈ ಮೇಲೆ ಎಳೆದುಕೊಂಡು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ತಾಲೂಕಿನ ಕಟಗಾರಕೊಪ್ಪದ ನಿವಾಸಿ ದಾಮೋದರ ಈರಯ್ಯ ಗೊಂಡ (32) ಮೃತ ದುರ್ದೈವಿ. ತೊಡೆಯ ಭಾಗಕ್ಕೆ ಬಲವಾದ ಪೆಟ್ಟು ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆಯುಂಟಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ. ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಶ್ರೀರಾಮ್ ಪೈನಾನ್ಸ್ ನಲ್ಲಿ ಹಣ ದುರುಪಯೋಗ ಪ್ರಕರಣ : ಪ್ರಮುಖ ಆರೋಪಿ ಸೆರೆ