ಹೊನ್ನಾವರ: ತಾಲೂಕಿನ ಗೇರುಸೊಪ್ಪಾ ಡ್ಯಾಮ್ ಸೈಟ್ ಸಮೀಪ ರಾಷ್ಟ್ರೀಯ ಹೆದ್ದಾರಿ ೬೯ರಲ್ಲಿ ಓಮ್ನಿ ಮತ್ತು ಟೂರಿಸ್ಟ್ ಬಸ್ ನಡುವೆ ಅಪಘಾತ ಸಂಭವಿಸಿ ಓಮ್ನಿ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಭಟ್ಕಳದ ಅಬ್ದುಲ್ ವಾಜಿದ್ (೩೭) ಮೃತಪಟ್ಟ ಓಮ್ನಿ ಚಾಲಕ. ಇವರು ಓಮ್ನಿಯಲ್ಲಿ ತಮ್ಮ ಪತ್ನಿಯೊಂದಿಗೆ ಭಟ್ಕಳದಿಂದ ಗೇರುಸೊಪ್ಪಾ ಮಾರ್ಗದಲ್ಲಿ ಸಾಗರಕ್ಕೆ ಹೋಗುತ್ತಿದ್ದರು. ಗೇರುಸೊಪ್ಪ ಡ್ಯಾಮ್ ಸೈಟ್ ಸಮೀಪ ಎದುರಿನಿಂದ ಬಂದ ಟೂರಿಸ್ಟ್ ಬಸ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಾಯಗೊಂಡ ಅಬ್ದುಲ್ ವಾಜಿದ್ ಅವರನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಪತ್ನಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಓಮ್ನಿ ನಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.
ಇದನ್ನೂ ಓದಿ : ಅಳ್ವೆಕೋಡಿಯಲ್ಲಿ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವ ನಾಳೆಯಿಂದ