ಹೊನ್ನಾವರ: ಎನ್.ವಿ. ಡಿ.ಸಿ.ಪಿ. ಕಾರ್ಯಕ್ರಮದ ಅಡಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಪ್ರತಿ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಚಟುವಟಿಕೆಯ ಅಂಗವಾಗಿ ತಾಲೂಕಿನ ಕೆಳಗಿನಪಾಳ್ಯದಲ್ಲಿ ಚಾಲನೆ ನೀಡಲಾಯಿತು.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ  ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ತಾಲೂಕು ಆರೋಗ್ಯಾಧಿಕಾರಿ ಡಾ. ಉಷಾ ಹಾಸ್ಯಗಾರ ಡೆಂಗ್ಯೂ ಜ್ವರದ ಕುರಿತು ಹಾಗೂ ಲಾರ್ವಾ ನಾಶ ಪಡಿಸುವುದು, ನೀರು ನಿಲ್ಲದಂತೆ ಸ್ವಚ್ಚತೆ ಕಾಪಾಡುವ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ : ಹೊನ್ನಾವರದ ಸಮರ್ಥ ಜೆ.ರಾವ್ ಚಾಂಪಿಯನ್

ಪ.ಪಂ. ಸದಸ್ಯ ಸುರೇಶ ಹೊನ್ನಾವರ ಮಾತನಾಡಿ, ಸಾರ್ವಜನಿಕರು ಸೊಳ್ಳೆ ನಿಯಂತ್ರಣಕ್ಕೆ ಸಹಕಾರ ನೀಡಿ ಎಚ್ಚರ ವಹಿಸಬೇಕು. ಡೆಂಗ್ಯೂ ಜ್ವರ ಲಕ್ಷಣಗಳು ಕಂಡು ಬಂದಾಗ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಇದನ್ನೂ ಓದಿ : ಓಮ್ನಿ – ಟೂರಿಸ್ಟ್ ಬಸ್ ನಡುವೆ ಡಿಕ್ಕಿ; ಭಟ್ಕಳದ ವ್ಯಕ್ತಿ ಸಾವು

ಆರೋಗ್ಯ ನಿರೀಕ್ಷಕ ಅಂದಪ್ಪ ಮಾತನಾಡಿ, ದಯವಿಟ್ಟು ಕಸವನ್ನು ರಸ್ತೆ ಪಕ್ಕದಲ್ಲಿ ಹಾಕಬೇಡಿ. ಪ್ರತಿನಿತ್ಯ ಆಗಮಿಸುವ ಕಸದ ವಾಹನಕ್ಕೆ ನೀಡಿ. ಡೆಂಗ್ಯೂ ನಿಯಂತ್ರಣ ಮಾಡಲು ಸಹಕರಿಸಿ ಎಂದು ಮನವಿ ಮಾಡಿದರು.

ಇದನ್ನೂ ಓದಿ : ಅಳ್ವೆಕೋಡಿಯಲ್ಲಿ ಪುನರ್ ಪ್ರತಿಷ್ಠಾ ಸುವರ್ಣ ಮಹೋತ್ಸವ ನಾಳೆಯಿಂದ

ಈ ಕಾರ್ಯಕ್ರಮದಲ್ಲಿ ಪ.ಪಂ. ಸದಸ್ಯೆ ಸುಜಾತ ಮೇಸ್ತ, ಆರೋಗ್ಯ ಇಲಾಖೆಯ ಕ್ಷೇತ್ರ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಮನೆ ಮನೆ ಭೇಟಿ ನೀಡಿ ಲಾರ್ವ ಸಮೀಕ್ಷೆಯ ಜೊತೆಯಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆಗಳ ಬಗ್ಗೆ, ಸೊಳ್ಳೆ ನಿಯಂತ್ರಣದ ಬಗ್ಗೆ ಕರ ಪತ್ರಗಳನ್ನು ನೀಡಿ ಆರೋಗ್ಯದ ಕುರಿತು ಮಾಹಿತಿ ನೀಡಿದರು.