ಭಟ್ಕಳ : ಭಾರತ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ನಲ್ಲಿ ನಡೆದ ಟಿ೨೦ ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಕ್ರೀಡಾಭಿಮಾನಿಗಳು ವಿಜಯೋತ್ಸವ ಆಚರಿಸಿದರು.
ಇದನ್ನೂ ಓದಿ : ಗೋರೆ ದೇವಸ್ಥಾನದಲ್ಲಿ ಕಳ್ಳತನ ನಡೆದಾಗ ಇದ್ದ ಬೈಕ್ ಯಾರದ್ದು?
ಭಟ್ಕಳ ಸರ್ಕಲ್ ನಲ್ಲಿ ತಡರಾತ್ರಿ ಕ್ರೀಡಾಭಿಮಾನಿಗಳು ಜಮಾವಣೆಗೊಂಡು ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಘೋಷಣೆಗಳು ಮೊಳಗಿದವು. ಈ ಸಂದರ್ಭ ಕೆಲಕಾಲ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಕೊನೆಗೆ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿ, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಫೇಸ್ಬುಕ್ ನಲ್ಲಿ ವಿಡಿಯೋ ನೋಡಿ : ಭಟ್ಕಳದಲ್ಲಿ ವಿಜಯೋತ್ಸವ
ಇನ್ಸ್ಟಾಗ್ರಾಂನಲ್ಲಿ ವಿಡಿಯೋ ನೋಡಿ : ಭಟ್ಕಳದಲ್ಲಿ ವಿಜಯೋತ್ಸವ