ಭಟ್ಕಳ: ಕಂಪ್ಯೂಟರ್ ಆಪರೇಟರ್ ಆಗಿ ಕೆಲಸಮಾಡುತ್ತಿದ್ದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಶಿರಾಲಿಯ ಮಹಾಲಕ್ಷಿ ಕೊಡಿಯಾ (೨೬) ಆತ್ಮಹತ್ಯೆ ಮಾಡಿಕೊಂಡವರು. ಇವರು ತಟ್ಟಿಹಕ್ಕಲು ಬಳಿಯ ಎಂ ಜಿ ಎಂ ಟ್ರೆಡರ್ಸ’ನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಕೆಲಸಕ್ಕೆ ಹೋಗುವುದು ಬೇಡ ಎಂದು ಮನೆಯವರು ಆಕೆಗೆ ಹೇಳಿದ್ದರು. ಇದೇ ಕಾರಣಕ್ಕೆ ಮನನೊಂದ ಆಕೆ ಜೂ.೨ರಂದು ಬಾವಿಗೆ ಹಾರಿ ಜೀವ ಬಿಟ್ಟಿದ್ದಾಳೆ. ಲೈನ್ಮೆನ್ ಆಗಿ ಕೆಲಸ ಮಾಡುತ್ತಿರುವ ಆಕೆಯ ಅಣ್ಣ ಕೇಶವ ಕೊಡಿಯಾ ಸಂಜೆ ಮನೆಗೆ ಬಂದಾಗ ಆಕೆ ಸಾವನಪ್ಪಿರುವ ವಿಷಯ ಗೊತ್ತಾಗಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಪಟ್ಟಣ ಪಂಚಾಯತ ಕಚೇರಿಗೆ ಲೋಕಾಯುಕ್ತ ಪೊಲೀಸರ ದಾಳಿ