ಭಟ್ಕಳ : ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವನ ಕೈ ತುಂಡಾದ ಘಟನೆ ಭಟ್ಕಳ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಗಾಯಾಳು ವ್ಯಕ್ತಿಯನ್ನು ದೇವಿದಾಸ ಮೊಗೇರ ತೆಂಗಿನಗುಂಡಿ ನಿವಾಸಿ ಎಂದು ಗುರುತಿಸಲಾಗಿದೆ. ರೈಲ್ವೆ ಪ್ರಯಾಣಿಕರು ಹಾಗೂ ಸ್ಥಳೀಯರ ಮಾಹಿತಿ ಪ್ರಕಾರ ಈತ ಮದ್ಯಸೇವನೆ ಮಾಡಿ ರೈಲ್ವೆ ನಿಲ್ದಾಣದಲ್ಲಿ ತಿರುಗಾಡುತ್ತಿದ್ದ ಎನ್ನಲಾಗಿದೆ. ಬೆಂಗಳೂರು ಮುರುಡೇಶ್ವರ ಎಕ್ಸಪ್ರೆಸ್ ರೈಲಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ. ಮಧ್ಯಾಹ್ನ ವೇಳೆಗೆ ರೈಲು ಭಟ್ಕಳಕ್ಕೆ ತಲುಪಿದೆ ವೇಳೆ ಈ ಘಟನೆ ನಡೆದಿದೆ. ನಂತರ ಗಾಯಳುವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ.
ಇದನ್ನೂ ಓದಿ : ಜುಲೈ ೧೦ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ