ಭಟ್ಕಳ: ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಟ್ಕಳದ ಐವರು ಉತ್ತಮ ಸಾಧನೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ಗೋಲ್ಡ್ ಮೆಡಲ್ ತಮ್ಮದಾಗಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸನಾತನ ಸಂಸ್ಕೃತಿ ರಕ್ಷಣೆ ನಮ್ಮೆಲ್ಲರ ಹೊಣೆ: ಅದಮಾರು ಶ್ರೀ
ನೇಪಾಳದಲ್ಲಿ ಜ.29, 30 ಹಾಗೂ 31ರಂದು ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದವರಲ್ಲಿ ಮಂಜುನಾಥ ಜಿ. ದೇವಡಿಗ, ಪ್ರವೀಣ ಆರ್. ಹರಿಜನ, ಆರ್ಯನ್ ವಿ. ನಾಯ್ಕ, ತೇಜಸ್ವಿನಿ ಯು. ಮೊಗೇರ ಮತ್ತು ಭರಣಿ ಎಚ್. ಆದಿದ್ರಾವಿಡ ಉತ್ತಮ ಸಾಧನೆ ಮಾಡಿ ಚಿನ್ನದ ಪದಕಗಳನ್ನು ಗಳಿಸುವ ಮೂಲಕ ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದಾರೆ.
ಇದನ್ನೂ ಓದಿ: ಅದ್ದೂರಿಯಾಗಿ ನಡೆದ ಕಾಲೇಜು ವಾರ್ಷಿಕೋತ್ಸವ
ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾರತವೂ ಸೇರಿದಂತೆ ಶ್ರೀಲಂಕಾ, ಭೂತಾನ, ನೇಪಾಳ, ಪಾಕಿಸ್ತಾನ, ಬಾಂಗ್ಲಾ ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಉತ್ತಮ ಸಾಧನೆಯನ್ನು ತೋರಿದ ವಿದ್ಯಾರ್ಥಿಗಳು ಫೆ.4ರಂದು ಬೆಳಿಗ್ಗೆ ಭಟ್ಕಳಕ್ಕೆ ಬರುತ್ತಿದ್ದು, ಅವರನ್ನು ಭಟ್ಕಳದ ನಾಗರೀಕರು, ವಿವಿಧ ಸಂಘ ಸಂಸ್ಥೆಗಳು
ಇಲ್ಲಿನ ಶಂಶುದ್ದೀನ್ ಸರ್ಕಲ್‌ನಲ್ಲಿ ಭವ್ಯ ಸ್ವಾಗತ ಕೋರಲು ಸಿದ್ಧತೆ ನಡೆಸಿಕೊಂಡಿದ್ದಾರೆನ್ನಲಾಗಿದೆ.
ರಾಜ್ಯದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯರು ವಿದ್ಯಾರ್ಥಿಗಳ ಪ್ರಯಾಣದ ಸಂಪೂರ್ಣ ವೆಚ್ಚವನ್ನು ಭರಿಸಿದ್ದು, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.