ಬೆಳಗಾವಿ : ಕಾಗವಾಡ ಕಾಂಗ್ರೆಸ್ ಶಾಸಕ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ ಆಗಿರುವ ರಾಜು ಕಾಗೆ ಅವರು ಇದೀಗ ಬಸ್ ಟಿಕೆಟ್ ದರ ಹೆಚ್ಚಳದ ಸುಳಿವು ನೀಡಿದ್ದಾರೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ಫಾಲೋವ್ ಮಾಡಲು ಇಲ್ಲಿ ಒತ್ತಿ.
ಕಾಗವಾಡದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾಗಿರುವ ಶಕ್ತಿ ಯೋಜನೆಯಿಂದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾನಿಯಲ್ಲಿದೆ. ಆದರೂ ಹಾನಿಯಿದ್ದರೂ ನಡೆಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸಂಸ್ಥೆಗೆ ಲಾಭ ಬರುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದ್ದೇವೆ. ಈ ನಿಟ್ಟಿನಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ : ನೀರು ತುಂಬಿದ ಹೊಂಡದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
೧೦ ವರ್ಷಗಳಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಆದರೆ ಬಸ್ಸಿಗೆ ಸಂಬಂಧಿಸಿದ ಡೀಸೆಲ್, ಪೆಟ್ರೋಲ್, ಆಯಿಲ್, ಬಿಡಿ ಭಾಗಗಳು ಸೇರಿದಂತೆ ಪ್ರತಿಯೊಂದರ ಬೆಲೆ ಹೆಚ್ಚಳವಾಗಿದೆ ಎಂದೂ ಅವರು ಹೇಳಿದರು.