ಭಟ್ಕಳ: ತಾಲೂಕು ಕಾನೂನು ಸೇವಾ ಸಮಿತಿಗೆ ಒಂದು ವರ್ಷದ ಅವಧಿಗೆ ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ ನಿರ್ದೇಶನದ ಮೇರೆಗೆ ಈ ನೇಮಕಾತಿ ನಡೆಯುತ್ತಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿ ಬರುವ ಸಮಾಜ ಸೇವೆಯಲ್ಲಿ ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಬಹುದು. ಯುವಕರು, ಯುವತಿಯರು, ವಯಸ್ಕರು, ನಿವೃತ್ತ ಶಿಕ್ಷಕರು, ನಿವೃತ್ತ ಸರಕಾರಿ ನೌಕರರು, ಹಿರಿಯ ನಾಗರೀಕರು, ಎಂ.ಎಸ್.ಡಬ್ಲ್ಯು ವಿದ್ಯಾರ್ಥಿಗಳು, ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು, ಸಂಘ ಸಂಸ್ಥೆಯ ಪದಾಧಿಕಾರಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಟ ೧೦ನೇ ತರಗತಿಯವರೆಗೆ ವ್ಯಾಸಾಂಗ ಮಾಡಿರಬೇಕು. ಜು.೨೫ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ : ಲೋಕ ಅದಾಲತ್ ಯಶಸ್ವಿ; ೧೧೧೯ ಪ್ರಕರಣ ಇತ್ಯರ್ಥ

ತಾಲೂಕಿನಲ್ಲಿ ಸುಮಾರು ೨೫ ರಿಂದ ೫೦ ಜನರನ್ನು ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಹರು ಅರ್ಜಿಗಳನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಾಲೂಕು ಕಾನೂನು ಸೇವಾ ಸಮಿತಿ ಕಚೇರಿಗೆ ಸಂಬಂಧಪಟ್ಟ ಕೆಲಸಗಳಿಗೆ ಒಂದು ದಿನಕ್ಕೆ ರೂ.೫೦೦, ಅರ್ಧ ದಿನಕ್ಕೆ ರೂ.೨೫೦ರಂತೆ ಗೌರವಧನ ನೀಡಲಾಗುವುದು. ಇನ್ನಿತರ ಉಪಯುಕ್ತ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಗಲಿದ ವೆಚ್ಚವನ್ನು ಭರಿಸಲಾಗುವುದು ಎಂದು ಕಾನೂನು ಸೇವಾ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

ಇದನ್ನೂ ಓದಿ : ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಚಿಂತನೆ : ರಾಜು ಕಾಗೆ

ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರು/ಸದಸ್ಯ ಕಾರ್ಯದರ್ಶಿಗಳು, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಲಯದ ಆವರಣ, ಭಟ್ಕಳ ಇವರನ್ನು ಸಂಪರ್ಕಿಸಬಹುದಾಗಿದೆ.