ಅಂಕೋಲಾ : ತಾಲೂಕಿನ ಶಿರೂರು ಬಳಿಯ ಗುಡ್ಡ ಕುಸಿತ(landslide) ಸ್ಥಳ ಮತ್ತು ಅತಿವೃಷ್ಟಿ ಪೀಡಿತ ಉಳುವರೆ ಗ್ರಾಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BY Vijayendra) ಭೇಟಿ ನೀಡಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಸಂತ್ರಸ್ತರನ್ನು ಭೇಟಿ ಮಾಡಿದ ಬಿ.ವೈ. ವಿಜಯೇಂದ್ರ(BY Vijayendra) ಅವರ ಅಹವಾಲು ಸ್ವೀಕರಿಸಿದರು. ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕುಮಟಾ ಶಾಸಕ ದಿನಕರ ಶೆಟ್ಟಿ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕರಾದ ರೂಪಾಲಿ ನಾಯ್ಕ, ಸುನೀಲ ನಾಯ್ಕ, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೇರಿ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ವಿಡಿಯೋ ಸಹಿತ ಇದನ್ನೂ ಓದಿ : ಭಾರಿ ಮಳೆಗೆ ಮನೆಯ ಅರ್ಧ ಭಾಗ ಕುಸಿತ
ಸದ್ಯ ನಡೆಯುತ್ತಿರುವ ರಸ್ತೆ ತೆರವು ಕಾರ್ಯಾಚರಣೆ, ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಬೇಕು. ಈ ಅನಿರೀಕ್ಷಿತ ದುರ್ಘಟನೆಯಲ್ಲಿ ಜೀವ ಕಳೆದುಕೊಂಡ ಕುಟುಂಬಗಳಿಗೆ, ಮನೆ ಹಾನಿಗೊಳಗಾದವರಿಗೆ ಹಾಗೂ ಸೂರು ಕಳೆದುಕೊಂಡವರಿಗೆ ತಡ ಮಾಡದೇ ತತಕ್ಷಣ ಸೂಕ್ತ ಹಾಗೂ ಶಾಶ್ವತ ಪರಿಹಾರವನ್ನು ರಾಜ್ಯ ಸರ್ಕಾರ ಕಲ್ಪಿಸಬೇಕು.
– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ