ಭಟ್ಕಳ : ಚಾಲಕನ ನಿಯಂತ್ರಣ ತಪ್ಪಿ ಕುಮಟಾಕ್ಕೆ ಬರುತ್ತಿದ್ದ ವಾಕರಸಾ ಸಂಸ್ಥೆಯ ಬಸ್ಸು ಮರಕ್ಕೆ ಡಿಕ್ಕಿ(Bus Accident) ಹೊಡೆದಿದೆ. ಚಾಲಕನ ಒಂದು ಕಾಲು ಕಟ್ ಆಗಿದೆ. ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಧಾರವಾಡ ಜಿಲ್ಲೆಯ ಕಲಘಟಗಿ(Kalaghatagi) ತಾಲೂಕಿನ ರಾಮನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ವಾಕರಸಾ ಸಂಸ್ಥೆ (NWKRTC) ಬಸ್ಸು ಮರಕ್ಕೆ ಡಿಕ್ಕಿ(Bus Accident) ಹೊಡೆದಿದೆ.
ವಿಡಿಯೋ ಸಹಿತ ಇದನ್ನೂ ಓದಿ : ಶಿರೂರು, ಉಳುವರೆ ಗ್ರಾಮಕ್ಕೆ ಬಿ.ವೈ. ವಿಜಯೇಂದ್ರ ಭೇಟಿ
ಚಾಲಕನ ಒಂದು ಕಾಲು ಕಟ್ ಆಗಿದೆ. ಚಾಲಕನನ್ನು ಕುಮಟಾ ತಾಲೂಕಿನ ಹೆಗಡೆ ಗ್ರಾಮದ ಕಂಚು ಗೋವಿಂದ ನಾಯ್ಕ ಎಂದು ಗುರುತಿಸಲಾಗಿದೆ. ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ (Hubballi KIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಡಿಯೋ ಸಹಿತ ಇದನ್ನೂ ಓದಿ : ಭಾರಿ ಮಳೆಗೆ ಮನೆಯ ಅರ್ಧ ಭಾಗ ಕುಸಿತ
ಈ ಬಸ್ಸು ಹುಬ್ಬಳ್ಳಿಯಿಂದ ಕುಮಟಾಕ್ಕೆ ಬರುತ್ತಿತ್ತು. ಬಸ್ಸಿನಲ್ಲಿ ೩೦ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.